ಮಂಡಳಿಯಿಂದ ₹ 6224 ಕೋಟಿ ಖರ್ಚು
ಕೆಕೆಆರ್‌ಡಿಬಿಗೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯ ಸರ್ಕಾರ ₹ 13 ಸಾವಿರ ಕೋಟಿ ಅನುದಾನ ಘೋಷಿಸಿದೆ. ಇದರಲ್ಲಿ ₹ 8 ಸಾವಿರ ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಒಪ್ಪಿಗೆ ಪಡೆಯಲಾಗಿದೆ. ನಾನು ಅಧಿಕಾರ ವಹಿಸಿಕೊಂಡ 27 ತಿಂಗಳ ಅವಧಿಯಲ್ಲಿ ₹ 6224 ಕೋಟಿ ಅನುದಾನ ಖರ್ಚು ಮಾಡಲಾಗಿದೆ ಎಂದು ಅಜಯ್ ಸಿಂಗ್ ಮಾಹಿತಿ ನೀಡಿದರು.