ಸೆ. 12 ಹಾಗೂ 13ರಂದು ನಿಗಮದ ತಾಲ್ಲೂಕು, ಜಿಲ್ಲಾ ಕೇಂದ್ರಗಳಿಂದ ಬೆಂಗಳೂರು ಮತ್ತು ಇತರೆ ಪ್ರಮುಖ ಸ್ಥಳಗಳಿಗೆ ಹಾಗೂ ಸೆ.13 ಮತ್ತು 14ರಂದು ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ ಹೆಚ್ಚುವರಿಯಾಗಿ 200 ಬಸ್‌ಗಳು ಓಡಾಡಲಿವೆ. ಸೆ.16 ರಿಂದ 19ರವರೆಗೆ ಸಂಸ್ಥೆ ವ್ಯಾಪ್ತಿಯ ಎಲ್ಲಾ ಜಿಲ್ಲೆಗಳಿಂದ ಬೆಂಗಳೂರು ಮತ್ತು ಇತರೆ ಸ್ಥಳಗಳಿಗೆ ಹೆಚ್ಚುವರಿ ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.