ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷರಾಗಿ ಕಾಂಗ್ರೆಸ್ ಮುಖಂಡ ಅರುಣಕುಮಾರ ಎಂ. ಪಾಟೀಲ ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡರು.

ನಗರದ ಜಗತ್ ರಸ್ತೆಯಲ್ಲಿರುವ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕಟ್ಟಡದ ಮೊದಲ ಮಹಡಿಯಲ್ಲಿರುವ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಅಧಿಕಾರ ವಹಿಸಿಕೊಂಡರು.

ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಶಾಸಕರಾದ ಅಲ್ಲಮಪ್ರಭು ಪಾಟೀಲ, ಎಂ.ವೈ.ಪಾಟೀಲ, ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಸೇರಿದಂತೆ ಹಲವರು ಅವರಿಗೆ ಶಾಲು ಹೊದಿಸಿ, ಹೂಗುಚ್ಛ ನೀಡಿ ಅಭಿನಂದಿಸಿದರು.

ಕುಡಾ ಅಧ್ಯಕ್ಷ ಮಜರ ಆಲಂಖಾನ್, ಕೆಕೆಆರ್ ಟಿಸಿ ಎಂಡಿ ಬಿ.ಸುಶೀಲಾ, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಜಿಲ್ಲಾ ಪಂಚಾಯಿತಿ ಸಿಇಒ ಭಂವರ್ಸಿಂಗ್ ಮೀನಾ, ಪಾಲಿಕೆ ಆಯುಕ್ತ ಅವಿನಾಶ ಶಿಂದೆ ಸೇರಿದಂತರ ಹಲವು ಅಧಿಕಾರಿಗಳು, ಮುಖಂಡರು ಪಾಲ್ಗೊಂಡಿದ್ದರು.