ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಕೆಆರ್‌ಟಿಸಿ: ರಾಚಪ್ಪ ಅಧಿಕಾರ ಸ್ವಿಕಾರ

Last Updated 1 ಜೂನ್ 2022, 16:11 IST
ಅಕ್ಷರ ಗಾತ್ರ

ಕಲಬುರಗಿ: ಇಲ್ಲಿನ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಹಿರಿಯ ಶ್ರೇಣಿ ಕೆಎಎಸ್‌ ಅಧಿಕಾರಿ ಎನ್. ರಾಚಪ್ಪ ಬುಧವಾರ ಅಧಿಕಾರ ಸ್ವೀಕರಿಸಿದರು.

ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಭುವನೇಶ್ ಪಾಟೀಲ ಅವರು ಅಧಿಕಾರ ಹಸ್ತಾಂತರಿಸಿದರು.

ನಿಗಮದ ವ್ಯಾಪ್ತಿಯಲ್ಲಿ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ಹಾಗೂ ವಿಜಯಪುರ ಜಿಲ್ಲೆಗಳು ಬರುತ್ತವೆ.

ರಾಚಪ್ಪ ಅವರು ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಉಪಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT