ಕಲಬುರಗಿ: ರಾಜ್ಯ ಕೋಲಿ ಕಬ್ಬಲಿಗ ಎಸ್.ಟಿ. ಹೋರಾಟ ಸಮಿತಿ ಅಧ್ಯಕ್ಷ ಲಚ್ಚಪ್ಪ ಎಸ್.ಜಮಾದಾರ ಅವರಿಗೆ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ಅಥವಾ ಯಾವುದಾದರೂ ಮಂಡಳಿ ಅಧ್ಯಕ್ಷರನ್ನಾಗಿ ಮಾಡಬೇಕು ಎಂದು ಸಮಿತಿ ರಾಜ್ಯ ಉಪಾಧ್ಯಕ್ಷ ರಾಮಲಿಂಗ ಎಸ್.ನಾಟೀಕರ್ ಒತ್ತಾಯಿಸಿದರು.

ಕೋಲಿ ಕಬ್ಬಲಿಗ ಸಮಾಜವನ್ನು ಎಸ್.ಟಿ. ಗೆ ಸೇರ್ಪಡೆ ಮಾಡುವುದಾಗಿ ಬಿಜೆಪಿ ನಾಯಕರು ನೀಡಿದ ಭರವಸೆ ಹುಸಿಯಾಗಿದೆ. ಹಾಗಾಗಿ, ಸಮಾಜಕ್ಕೆ ಮೋಸ ಮಾಡಿದ ಬಿಜೆಪಿಯನ್ನು ವಿಧಾನಸಭಾ ಚುನಾವಣೆಯಲ್ಲಿ ಸೋಲಿಸಿ ಕಾಂಗ್ರೆಸ್ ಗೆಲ್ಲಿಸಲು ರಾಜ್ಯದಾದ್ಯಂತ ಕರೆ ಕೊಡಲಾಗಿತ್ತು. ಜಿಲ್ಲೆಯಲ್ಲೂ ಕಾಂಗ್ರೆಸ್ ಪರ ಪ್ರಚಾರ ಮಾಡಿದ ಫಲವಾಗಿ ಏಳು ಕ್ಷೇತ್ರಗಳಲ್ಲಿ ಗೆದ್ದಿದೆ. ಸರ್ಕಾರ ಕೂಡ ರಚನೆಯಾಗಿದೆ. ಮುಂದಿನ ತಾಲ್ಲೂಕು, ಜಿಲ್ಲಾ ಪಂಚಾಯಿತಿ ಮತ್ತು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಬಹುಮತ ಬರಲು ಜಮಾದಾರ ಅವರಿಗೆ ಸೂಕ್ತ ಸ್ಥಾನ ಕಲ್ಪಿಸಬೇಕು ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.

ಸಮಿತಿ ರಾಜ್ಯ ಉಪಾಧ್ಯಕ್ಷರಾದ ಬಸವರಾಜ ಹಾಗರಗುಂಡಗಿ, ಮಲ್ಲಿಕಾರ್ಜುನ ಸಿ.ಗುಡಬಾ, ಸಹ ಕಾರ್ಯದರ್ಶಿ ವೈಜನಾಥ ಜಮಾದಾರ ಕಟ್ಟೋಳಿ, ನಾಗೇಶ ಧಮ್ಮೂರ್, ಆನಂದ ಸಂತಾಳ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.