ಶಹಾಬಾದ್: ‘ಕೋಲ್ಕತ್ತದ ಸರ್ಕಾರಿ ಆರ್.ಜಿ.ಕರ್ ವೈದ್ಯಕೀಯ ಕಾಲೇಜಿನ ವೈದ್ಯೆ ಮೇಲಿನ ಅತ್ಯಾಚಾರ, ಕೊಲೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಈ ಪೈಶಾಚಿಕ ಕೃತ್ಯವನ್ನು ಎಐಡಿವೈಓ ಸಂಘಟನೆ ಬಲವಾಗಿ ಖಂಡಿಸುತ್ತದೆ’ ಎಂದು ಜಿಲ್ಲಾಧ್ಯಕ್ಷ ಜಗನ್ನಾಥ ಎಸ್.ಎಚ್.ಆಕ್ರೋಶ ವ್ಯಕ್ತಪಡಿಸಿದರು.
ಎಐಎಂಎಸ್‌ಎಸ್, ಎಐಡಿಎಸ್ಒ, ಎಐಡಿವೈಒ ಸಂಘಟನೆಯ ಕಾರ್ಯಕರ್ತರು ಶನಿವಾರ ನಗರದ ಬಸವೇಶ್ವರ ವೃತ್ತದಲ್ಲಿ ಕ್ಯಾಂಡಲ್ ಮಾರ್ಚ್ ಮಾಡುವ ಮೂಲಕ ಪೈಶಾಚಿಕ ಕೃತ್ಯವನ್ನು ಖಂಡಿಸಿ ಪ್ರತಿಭಟಿಸಿದರು.
ಸ್ಥಳೀಯರಾದ ಡಾ.ಉರ್ಷಿ ಮೆತೆವಲ್ಲಿ ಮತನಾಡಿ, ‘ಜನರ ಜೀವವನ್ನು ರಕ್ಷಿಸಬೇಕಾದ ವೈದ್ಯರಿಗೇ ರಕ್ಷಣೆ ಇಲ್ಲದಂತಾಗಿರುವುದು ಅತ್ಯಂತ ಹೇಯ ಕೃತ್ಯವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಸಂತ್ರಸ್ತೆಗೆ ತ್ವರಿತ ನ್ಯಾಯಕ್ಕಾಗಿ ಒತ್ತಾಯಿಸಿದರು. ಕಿರಿಯ ವೈದ್ಯರು ಕೆಲಸ ನಿಲ್ಲಿಸಿ, ಪ್ರತಿಭಟನೆಗಳನ್ನು ಆಯೋಜಿಸುತ್ತಿರುವುದು ನಿರೀಕ್ಷಿತ ಮತ್ತು ನ್ಯಾಯಸಮ್ಮತವಾಗಿದೆ. ಅಲ್ಲದೆ ದೇಶದಾದ್ಯಂತ ಜನರು ಈ ಘಟನೆಯನ್ನು ಖಂಡಿಸಿ ಹಾಗೂ ಮಹಿಳೆಯರ ಮೇಲೆ ಹೆಚ್ಚುತ್ತಿರುವ ಅಪರಾಧಗಳ ವಿರುದ್ಧ ಬೀದಿಗಿಳಿದು ಪ್ರತಿಭಟಿಸುತ್ತಿರುವುದು ಹೋರಾಟಕ್ಕೆ ಮತ್ತಷ್ಟು ಬಲ ಬಂದಂತಾಗಿದೆ’ ಎಂದರು.
ಎಐಎಂಎಸ್‌ಎಸ್ ಸಂಘಟನೆ ಜಿಲ್ಲಾಧ್ಯಕ್ಷೆ ಗುಂಡಮ್ಮ ಮಡಿವಾಳ ಮಾತನಾಡಿದರು. ಈ ಕುರಿತು ಕೂಡಲೆ ಮಧ್ಯೆ ಪ್ರವೇಶಿಸಿ ಸಂತ್ರಸ್ತೆಗೆ ನ್ಯಾಯ ಸಿಗುವಂತೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ರಾಷ್ಟ್ರಪತಿಗಳಿಗೆ ಪತ್ರ ಬರೆದು ಎಐಡಿವೈಓ ಸಮಿತಿ ಆಗ್ರಹಿಸಿದೆ.
ಈ ಸಂದರ್ಭದಲ್ಲಿ ಡಾ.ಜುಬೇರ್, ಮಹಾದೇವಿ ಮಾನೆ, ಅಂಬಿಕಾ ಗುರಜಾಲಕರ, ರೇಣುಕಾ ಮಾನೆ, ರಾಧಿಕಾ ಚೌಧರಿ, ಮಹಾದೇವ ಅತನೂರು, ಸುಕನ್ಯಾ, ರಘು ಪವಾರ್, ರಮೇಶ್ ದೇವಕರ ಸೇರಿದಂತೆ ಅನೇಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಎಐಎಮಎಸಎಸ್ ಎಐಡಿಎಸ್ಓ ಎಐಡವೈಓ ಸಂಘಟನೆಯ ಕಾರ್ಯಕರ್ತರು ನಗರದ ಬಸವೇಶ್ವರ ವೃತ್ತದಲ್ಲಿ ಕ್ಯಾಂಡಲ್ ಮಾರ್ಚ್ ಮಾಡುವ ಮೂಲಕ ಈ ಪೈಶಾಚಿಕ ಕೃತ್ಯವನ್ನು ಪ್ರತಿಭಟಿಸಿ ಖಂಡಿಸಿದರು