ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾಧವ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

Published 23 ಏಪ್ರಿಲ್ 2024, 5:00 IST
Last Updated 23 ಏಪ್ರಿಲ್ 2024, 5:00 IST
ಅಕ್ಷರ ಗಾತ್ರ

ಕಲಬುರಗಿ: ‘ಕಲಬುರಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಉಮೇಶ ಜಾಧವ ಅವರು ಚುನಾವಣಾ ಪ್ರಚಾರದ ವೇಳೆ ಲೋಕಸಭಾ ಸಾರ್ವತ್ರಿಕ ಚುನಾವಣೆಯ 2024ರ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ’ ಎಂದು ಆರೋಪಿಸಿ ಕೆಪಿಸಿಸಿ ಕಾನೂನು, ಮಾನವ ಹಕ್ಕುಗಳು ಹಾಗೂ ಆರ್‌ಟಿಐ ವಿಭಾಗವು ರಾಜ್ಯ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ಏ.17ರಂದು ನೀಡಿದೆ.

‘ಸಂಸದ ಜಾಧವ ಅವರು ಚಿತ್ತಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲಕರ್ಟಿಯ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ನಡೆಸಿದ್ದರು. ಅಲ್ಲಿ, ‘ಅಯೋಧ್ಯೆಯ ರಾಮ ಮಂದಿರ ವಿಚಾರವಾಗಿ ಕಾಂಗ್ರೆಸ್ ನಾಯಕರು ಹಿಂದೂ ವಿರೋಧಿ ಮಾನಸಿಕತೆ ಪ್ರದರ್ಶಿಸಿದರು. ತುಷ್ಟೀಕರಣ ನೀತಿಯಿಂದ ಒಂದು ಸಮುದಾಯದ ಓಲೈಕೆಗಾಗಿ ನೀಚ ರಾಜಕಾರಣ ಮಾಡಿ, ಭಾರತದ ಸನಾತನ ಹಿಂದೂ ಧರ್ಮೀಯರ ಮನಸ್ಸಿಗೆ ಘಾಸಿ ಮಾಡಿದ ಕಾಂಗ್ರೆಸ್‌ಗೆ ಈ ಸಲ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸುವುದು ನಿಶ್ಚಿತ ಎನ್ನುವ ಮೂಲಕ ಮತಕ್ಷೇತ್ರದ ಜನರಲ್ಲಿ ಕೋಮು ಸಾಮರಸ್ಯಕ್ಕೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಧರ್ಮಗಳ ನಡುವೆ ಗಲಭೆಗೆ ಪ್ರಚೋದನೆ ನೀಡಿ, ಮತಗಳನ್ನು ಗಳಿಸುವ ನೀಡುವ ಹೇಳಿಕೆ ಇದಾಗಿದೆ. ಹೀಗಾಗಿ 6 ದಿನಗಳ ಕಾಲ ಚುನಾವಣಾ ಪ್ರಚಾರ ನಡೆಸದಂತೆ ಬಿಜೆಪಿ ಅಭ್ಯರ್ಥಿ ಮೇಲೆ ನಿರ್ಬಂಧ ಹೇರಬೇಕು. ಜೊತೆಗೆ ಬಿಜೆಪಿ ಅಭ್ಯರ್ಥಿ ವಿರುದ್ಧ ಮಾದರಿ ನೀತಿ ಸಂಹಿತೆ ಉಲ್ಲಂಘನೆಗಾಗಿ ಪ್ರಕರಣದ ದಾಖಲಿಸಬೇಕು’ ಎಂದು ದೂರಿನಲ್ಲಿ ಕೆಪಿಸಿಸಿ ಕಾನೂನು, ಮಾನವ ಹಕ್ಕುಗಳು ಹಾಗೂ ಆರ್‌ಟಿಐ ವಿಭಾಗದ ಕಾರ್ಯದರ್ಶಿ ಭೀಮನಗೌಡ ಪರನಗೊಂಡ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT