ಕಲಬುರಗಿ: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪಗಳ ಹಿನ್ನೆಲೆಯಲ್ಲಿ ಸರ್ಕಾರ ತನಿಖೆಗೆ ವಹಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಜಿಲ್ಲೆಯ ಚಿಂಚೋಳಿಯ ಚಂದ್ರಂಪಳ್ಳಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೆಪಿಎಸ್ಸಿ ನಡೆಸಿದ ಪಿಡಿಒ, ಬಿಬಿಎಂಪಿ ಸಹಾಯಕ ಎಂಜಿನಿಯರ್, ವಾಣಿಜ್ಯ ತೆರಿಗೆ ಪರಿವೀಕ್ಷಕ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಬಗ್ಗೆ ವ್ಯಾಪಕ ದೂರುಗಳು ಕೇಳಿ ಬಂದಿದ್ದವು. ಹೀಗಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತನಿಖೆಗೆ ವಹಿಸಿದ್ದಾರೆ’ ಎಂದರು.

‘ಅಕ್ರಮದಿಂದ ನೇಮಕವಾಗಿರುವ ಪಿಡಿಒಗಳನ್ನು ನಾವು ಸೇರಿಸಿಕೊಳ್ಳುವುದಿಲ್ಲ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮೂಲಕ ಗ್ರಾಮೀಣ ನೀರು ಸರಬರಾಜು ವಿಭಾಗದ ಸಹಾಯಕ ಎಂಜಿನಿಯರ್
ಗಳನ್ನು ಅಕ್ರಮಕ್ಕೆ ಆಸ್ಪದವಿಲ್ಲದಂತೆ ನೇಮಕಾತಿ ಮಾಡಿಕೊಳ್ಳಲಾಗಿತ್ತು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.