ಸೋಮವಾರ, ಡಿಸೆಂಬರ್ 9, 2019
20 °C

ಸೇಡಂ: ಕರವೇ ಪದಾಧಿಕಾರಿಗಳ ಬಂಧನ, ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸೇಡಂ (ಕಲಬುರ್ಗಿ ಜಿಲ್ಲೆ): ಎಲ್‌ಟಿಟಿ ಮತ್ತು ಇಂಟರ್ ಸಿಟಿ ರೈಲು ನಿಲುಗಡೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟಿ ಬಣ) ಪದಾಧಿಕಾರಿಗಳು ಮಂಗಳವಾರ ಬೆಳಿಗ್ಗೆ ರೈಲು ತಡೆ ನಡೆಸಲು ಮುಂದಾದಾಗ ಪೊಲೀಸರು ಅವರನ್ನು ಬಂಧಿಸಿ ಬಿಡುಗಡೆ ಮಾಡಿದ್ದಾರೆ. 

ಅನೇಕ ಬಾರಿ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಮನವಿ ಕೊಟ್ಟರೂ ರೈಲು ನಿಲುಗಡೆಯಾಗಿಲ್ಲ. ಆದ್ದರಿಂದ ರೈಲು ಹಳಿ ಮೇಲೆ ಮಲಗಿ ಪ್ರತಿಭಟಿಸುವುದಾಗಿ ಮನವಿ ಪೊಲೀಸ್ ಇಲಾಖೆಯ ಗಮನಕ್ಕೆ ತಂದಿದ್ದರು. ಆದರೆ ರೈಲು ತಡೆಗೆ ಮುಂದಾದಾಗ ರೈಲ್ವೆ ಪೊಲೀಸರ ನೇತೃತ್ವದಲ್ಲಿ ಮಂಗಳವಾರ ಬೆಳಿಗ್ಗೆ 6ಕ್ಕೆ ಬಂಧಿಸಿ ಬಿಡುಗಡೆಗೊಳಿಸಲಾಗಿದೆ. 

ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಘಟಕ ಅಧ್ಯಕ್ಷ ರಾಮಚಂದ್ರ ಗುತ್ತೇದಾರ ಸೇರಿದಂತೆ ಪದಾಧಿಕಾರಿಗಳು ಇದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು