ಸೋಮವಾರ, ಆಗಸ್ಟ್ 2, 2021
28 °C

ಸಾರಿಗೆ ಸಂಸ್ಥೆ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ದರೋಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಇಲ್ಲಿನ ಶ್ರೀಗುರು ಕಾಲೇಜ್‌ ಹತ್ತಿ ಸೋಮವಾರ ರಾತ್ರಿ ಸಾರಿಗೆ ಸಂಸ್ಥೆಯ ಸಿಬ್ಬಂದಿಯೊಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಹಣ, ಹೆಲ್ಮೆಟ್‌ ದರೋಡೆ ಮಾಡಲಾಗಿದೆ.

ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕಲಬರ್ಗಿ ಘಟಕ–1ರ ಚಾರ್ಜ್‌ಮನ್‌ ಆದ ರತ್ನಪ್ಪ ಪಿ. ಜೈನ್ ಅವರೇ ಹಲ್ಲೆಗೆ ಒಳಗಾದವರು. ಸೋಮವಾರ ರಾತ್ರಿ 11ರ ಸುಮಾರಿಗೆ ಕೆಲಸ ಮುಗಿಸಿ ಮನೆಗೆ ತೆರಳುವಾಗ, ಅಡ್ಡಗಟ್ಟಿದ ಇಬ್ಬರು ದುಷ್ಕರ್ಮಿಗಳು ಹಣ ಕಿತ್ತುಕೊಳ್ಳಲು ಯತ್ನಿಸಿದರು. ಆಗ ರತ್ನಪ್ಪ ವಿರೋಧ ತೋರಿದ್ದರಿಂದ ಮಾರಕಾಸ್ತ್ರದಿಂದ ಅವರ ತಲೆಗೆ ಹೊಡೆದರು. ರಕ್ತಸ್ರಾವದಿಂದ ಅವರು ಕೆಳಗೆ ಬಿದ್ದ ಮೇಲೆ ಹಣ, ಹೆಲ್ಮೆಟ್‌ ಮತ್ತಿತರ ವಸ್ತುಗಳನ್ನು ದೋಚಿ ಪರಾರಿಯಾದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು