ಕುಮಾರಸ್ವಾಮಿ ರಾಜೀನಾಮೆ ಕೊಟ್ಟು ಖರ್ಗೆ ಮುಖ್ಯಮಂತ್ರಿ ಮಾಡಲಿ: ಯಡಿಯೂರಪ್ಪ

ಬುಧವಾರ, ಮೇ 22, 2019
34 °C

ಕುಮಾರಸ್ವಾಮಿ ರಾಜೀನಾಮೆ ಕೊಟ್ಟು ಖರ್ಗೆ ಮುಖ್ಯಮಂತ್ರಿ ಮಾಡಲಿ: ಯಡಿಯೂರಪ್ಪ

Published:
Updated:

ಕಲಬುರ್ಗಿ: ‘ಮಲ್ಲಿಕಾರ್ಜುನ ಖರ್ಗೆ ಎಂದೋ ಮುಖ್ಯಮಂತ್ರಿ ಆಗಬೇಕಿತ್ತು’ ಎಂಬ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಬುಧವಾರ ಇಲ್ಲಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ‘ಕುಮಾರಸ್ವಾಮಿ ತಮ್ಮ ಸ್ಥಾನಕ್ಕೆ ರಾಜೀನಾಮಕೆ ಕೊಟ್ಟು ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡಲಿ. ನಾಳೆಯೇ ರಾಜೀನಾಮೆ ನೀಡಿ ತಮ್ಮ ಕನಸು ನನಸಾಗಿಸಿಕೊಳ್ಳಲಿ’ ಎಂದು ಹೇಳಿದರು.

‘ಚಿಂಚೋಳಿ ದತ್ತು ಪಡೆಯುತ್ತೇನೆ’ ಎಂಬ ಕುಮಾರಸ್ವಾಮಿ ಹೇಳಿಕೆಗೆ, ‘ಇದುವರೆಗೂ ಚಿಂಚೋಳಿ ಕಡೆಗೆ ತಿರುಗಿಯೂ ನೋಡದ ಕುಮಾರಸ್ವಾಮಿ ಅವರು ಚುನಾವಣೆ ಇದೆ ಅಂತ ಏನೇನೋ ಭರವಸೆಕೊಟ್ಟು ಹೋಗಿದ್ದಾರೆ. ಚಿಂಚೋಳಿ ದತ್ತು ಪಡೆಯುವುದಾದರೆ ಇಷ್ಟು ದಿನ ಏನು ಮಾಡುತ್ತಿದ್ದರು’ ಎಂದು ಪ್ರಶ್ನಿಸಿದರು.

ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಾತನಾಡಿ, ‘ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಆಗಬೇಕಿತ್ತು ಎಂಬುದು ಬಾಲಿಶ ಹೇಳಿಕೆ ಮತ್ತು ಚುನಾವಣೆ ಗಿಮಿಕ್ ಆಗಿದೆ. ಖರ್ಗೆ ಅವರ ಹಿರಿತನ ಮತ್ತು ಅವರ ಸೇವೆಯನ್ನು ಕಾಂಗ್ರೆಸ್ ಸದುಪಯೋಗ ಮಾಡಿಕೊಳ್ಳುತ್ತಿಲ್ಲ. ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡಲು ಕುಮಾರಸ್ವಾಮಿ ರಾಜೀನಾಮೆ ಕೊಡಬೇಕು’ ಎಂದು ಒತ್ತಾಯಿಸಿದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 11

    Happy
  • 4

    Amused
  • 1

    Sad
  • 0

    Frustrated
  • 5

    Angry

Comments:

0 comments

Write the first review for this !