ಸೋಮವಾರ, ಸೆಪ್ಟೆಂಬರ್ 28, 2020
21 °C
15ರಂದು ಆರು ವಿಭಾಗಗಳ ಅಧಿಕಾರ ಸಭೆ ಮಂಡಳಿ ಅಧ್ಯಕ್ಷ ರಾಜೂಗೌಡ ಹೇಳಿಕೆ

ಕಲಬುರ್ಗಿ: ‘ಜಲಮಂಡಳಿ ಸಭೆಯಲ್ಲಿ ಹೊಸ ಯೋಜನೆಗೆ ರೂಪ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಆರು ವಿಭಾಗಗಳ ಅಧಿಕಾರಿಗಳ ಸಭೆ ಹಾಗೂ ಪ್ರಗತಿ ಪರಿಶೀಲನಾ ಸಭೆಯನ್ನು ಸೆ 15ರಂದು ಬೆಂಗಳೂರಿನಲ್ಲಿ ಕರೆಯಲಾಗಿದ್ದು, ಹೊಸ ಯೋಜನೆಗೆ ಸ್ಪಷ್ಟ ರೂಪ ದೊರೆಯಲಿದೆ ಎಂದು ಮಂಡಳಿ ಅಧ್ಯಕ್ಷ, ಸುರಪುರ ಶಾಸಕ ನರಸಿಂಹ ನಾಯಕ (ರಾಜೂಗೌಡ) ತಿಳಿಸಿದರು.

ಆರು ವಿಭಾಗಗಳಲ್ಲಿ ಈಗಾಗಲೇ ಕೈಗೆತ್ತಿಕೊಂಡಿರುವ ಯೋಜನೆಗಳು ಮತ್ತು ಹೊಸದಾಗಿ ರೂಪಿಸಬೇಕಾಗಿರುವ ಯೋಜನೆ ಕುರಿತು ಅವರಿಂದ ಮಾಹಿತಿ ಪಡೆದುಕೊಂಡು ಪ್ರಗತಿ ಪರಿಶೀಲನೆ ನಡೆಸಲಾಗುವುದು. ಮಂಡಳಿ ವ್ಯವಸ್ಥಾಪಕ ನಿರ್ದೇಶಕರು ದಿನಾಂಕ ನಿಗದಿಪಡಿಸಿದ್ದು, ಈ ಸಭೆಯಲ್ಲಿ ಮಂಡಳಿಯ ಸಮಗ್ರ ಮಾಹಿತಿ ಸಿಗಲಿದೆ ಎಂದು ಸೋಮವಾರ ನಗರದಲ್ಲಿ ತಿಳಿಸಿದರು.

‘ಅಧಿಕಾರ ವಹಿಸಿಕೊಂಡ ನಂತರ ಸಭೆ ನಿಗದಿಪಡಿಸಲಾಗಿತ್ತು. ಆದರೆ, ಅಧಿಕಾರಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದರಿಂದ ಸಭೆ ನಡೆಸಲಾಗಲಿಲ್ಲ. ಈಗ ಸಭೆ ನಡೆಯಲಿದೆ’ ಎಂದು ಹೇಳಿದರು.

ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಅವರೊಂದಿಗೆ ಚರ್ಚೆ ನಡೆಸಿ, ಮಂಡಳಿಯ ಆಡಳಿತ ಮಂಡಳಿಯ ಸಭೆಯನ್ನು ನಡೆಸಿ ಹೊಸ ಯೋಜನೆಗಳಿಗೆ ರೂಪ ನೀಡಲಾಗುವುದು. ಕಲಬುರ್ಗಿ ನಗರಕ್ಕೆ ನಿರಂತರ ನೀರು ಪೂರೈಕೆ ಸೇರಿದಂತೆ ಹಲವು ಯೋಜನೆಗಳ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ರಾಜೂಗೌಡ ತಿಳಿಸಿದರು.

ಈ ಹಿಂದೆ ಆರಂಭಿಸಿರುವ ಯೋಜನೆಗಳು ಮಂದವಾಗಿ ನಡೆಯುತ್ತಿದ್ದು, ಅವುಗಳನ್ನು ವೇಗಗೊಳಿಸಲಾಗುವುದು. ಒಂದಿಷ್ಟು ನಗರ ನೀರು ಸರಬರಾಜು ಹೊಸ ಯೋಜನೆಗಳಿಗೆ ಸ್ಥಳೀಯವಾಗಿಯೇ ಟೆಂಡರ್ ಆಹ್ವಾನಿಸಲು ಅನುಮತಿ ನೀಡುವ ಚಿಂತನೆ ಇದೆ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.