ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖರ್ಗೆ ಪ್ರಧಾನಿ ಅಭ್ಯರ್ಥಿ ಸಾಧ್ಯತೆ

ರಾಜ್ಯಸಭಾ ಸದಸ್ಯ ಎಲ್‌.ಹನುಮಂತಯ್ಯ ಹೇಳಿಕೆ
Last Updated 22 ಏಪ್ರಿಲ್ 2019, 9:23 IST
ಅಕ್ಷರ ಗಾತ್ರ

ಕಲಬುರ್ಗಿ: ‘ಯುಪಿಎ ಮೈತ್ರಿಕೂಟಕ್ಕೆ ಬಹುಮತ ಬಂದು ರಾಹುಲ್‌ ಗಾಂಧಿ ಪ್ರಧಾನಿಯಾಗಲು ಮೈತ್ರಿ ಪಕ್ಷಗಳು ಒಪ್ಪದಿದ್ದರೆ ಮಲ್ಲಿಕಾರ್ಜುನ ಖರ್ಗೆ ಅವರೇ ಪ್ರಧಾನಿ ಆಗುವ ಸಾಧ್ಯತೆ ಇದೆ’ ಎಂದು ರಾಜ್ಯಸಭಾ ಸದಸ್ಯ ಎಲ್‌.ಹನುಮಂತಯ್ಯ ಹೇಳಿದರು.

ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಲಬುರ್ಗಿ ಮತದಾರರು ಇಂತಹ ಅವಕಾಶ ಕಳೆದುಕೊಳ್ಳಬಾರದು. ಖರ್ಗೆ ಅವರನ್ನು ಗೆಲ್ಲಿಸಬೇಕು’ ಎಂದು ಮನವಿ ಮಾಡಿದರು.

‘ಸಾಮಾಜಿಕ ನ್ಯಾಯದ ಪರ ಇರುವ ಖರ್ಗೆ ಅವರು ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯ ವಿರೋಧಿಯಲ್ಲ. ಹಾಗಾಗಿ ದಲಿತ ಅಸ್ಪೃಶ್ಯ ಸಮುದಾಯ (ಎಡ–ಬಲ) ಒಗ್ಗಟ್ಟಾಗಿ ಖರ್ಗೆ ಅವರ ಗೆಲುವಿಗೆ ಶ್ರಮಿಸಬೇಕು’ ಎಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT