ಗುರುವಾರ , ಜನವರಿ 21, 2021
30 °C

ಕಲಬುರ್ಗಿ: ರೈತ, ಕಾರ್ಮಿಕ ಸಂಘಟನೆಗಳಿಂದ ಮಾನವ ಸರಪಳಿ ನಿರ್ಮಾಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಕೇಂದ್ರ ಸರ್ಕಾರ ‌ಜಾರಿಗೆ  ತರಲು‌ ಮುಂದಾಗಿರುವ ರೈತ, ಕಾರ್ಮಿಕ ವಿರೋಧಿ ನೀತಿಗಳನ್ನು ‌ಖಂಡಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಹೋರಾಟ ಸಮಿತಿ (ಜೆಸಿಟಿಯು) ಕರೆ ನೀಡಿರುವ ಸಾರ್ವತ್ರಿಕ ‌ಮುಷ್ಕರದ ಅಂಗವಾಗಿ ವಿವಿಧ ಸಂಘಟನೆಗಳ ಕಾರ್ಯಕರ್ತರು ನಗರದ ಸರ್ದಾರ್ ವಲ್ಲಭಭಾಯಿ ‌ಪಟೇಲ್ ವೃತ್ತದಲ್ಲಿ ‌ಪ್ರತಿಭಟನೆ ನಡೆಸಿದರು.

ಹಣಕಾಸು ವಲಯ ಸೇರಿದಂತೆ ರೈಲ್ವೆ, ವಿಮಾನಯಾನ, ಆರೋಗ್ಯ, ಶಿಕ್ಷಣ, ವಿದ್ಯುತ್, ದೂರ ಸಂಪರ್ಕ, ಬ್ಯಾಂಕ್, ವಿಮಾ ವಲಯದ ಉದ್ದಿಮೆಗಳ ಖಾಸಗೀಕರಣ ನಿಲ್ಲಿಸಬೇಕು. ಕಾರ್ಖಾನೆಗಳು, ಬಂದರು ಮುಂತಾದ ಸರ್ಕಾರದ ಉತ್ಪಾದನಾ ಮತ್ತು ಸೇವಾ ಸಾಂಸ್ಥೀಕರಣವನ್ನು ನಿಲ್ಲಿಸಬೇಕು. ಕಾರ್ಮಿಕ ವಿರೋಧಿ ಕಾರ್ಮಿಕ ಸಂಹಿತೆಗಳು ಹಾಗೂ ರೈತ ವಿರೋಧಿ ‌ಕಾನೂನುಗಳನ್ನು ಹಿಂತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಎಐಟಿಯುಸಿ ಕಾರ್ಮಿಕ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಪ್ರಭುದೇವ ಯಳಸಂಗಿ, ಸಿಐಟಿಯು ಜಿಲ್ಲಾ ಉಪಾಧ್ಯಕ್ಷೆ ಗೌರಮ್ಮ ಪಿ. ಪಾಟೀಲ, ಜನವಾದಿ ಮಹಿಳಾ ಸಂಘಟನೆ ರಾಜ್ಯ‌ ಸಂಚಾಲಕಿ ಕೆ. ನೀಲಾ, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ಎಐಯುಟಿಯುಸಿ ಕಾರ್ಮಿಕ ‌ಸಂಘಟನೆ ಜಿಲ್ಲಾ ಕಾರ್ಯದರ್ಶಿ ‌ಎಸ್.ಎಂ. ಶರ್ಮಾ, ಐಎನ್ ಟಿಯುಸಿ ಜಿಲ್ಲಾ ಅಧ್ಯಕ್ಷ ಅಶೋಕ ಘೂಳಿ, ಎನ್ ಸಿಎಲ್ ಜಿಲ್ಲಾ ಮುಖಂಡ ಶಂಕರ ಕಟ್ಟಿಸಂಗಾವಿ, ಡಾ.ಸೀಮಾ ದೇಶಪಾಂಡೆ, ರಾಧಾ, ಭೀಮಾಶಂಕರ ಪಾಣೆಗಾಂವ, ಹಣಮಂತ ಎಸ್.ಎಚ್, ಈರಣ್ಣ ಇಸಬಾ ಇತರರು ಇದ್ದರು.

ನಂತರ ಜಿಲ್ಲಾಧಿಕಾರಿ ‌ಕಚೇರಿವರೆಗೆ ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಘೋಷಣೆ ಕೂಗುತ್ತಾ ಮೆರವಣಿಗೆಯಲ್ಲಿ ತೆರಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು