ಮಂಗಳವಾರ, 10 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಾರ್ಖಾನೆಗೆ ಕಾರ್ಮಿಕರ ಪೂರೈಕೆ ಸಂಬಂಧ ಮಾರಾಮಾರಿ: 9 ಜನರ ಬಂಧನ

ವಾಡಿ ಹಲ್ಲೆ ಪ್ರಕರಣ: ದೂರು ಪ್ರತಿದೂರು ದಾಖಲು
Published 20 ಆಗಸ್ಟ್ 2024, 16:24 IST
Last Updated 20 ಆಗಸ್ಟ್ 2024, 16:24 IST
ಅಕ್ಷರ ಗಾತ್ರ

ವಾಡಿ: ಅದಾನಿ ಒಡೆತನದ ಎಸಿಸಿ ಸಿಮೆಂಟ್ ಕಾರ್ಖಾನೆಗೆ ಕಾರ್ಮಿಕರನ್ನು ಕೆಲಸಕ್ಕೆ ಹಚ್ಚುವ ವಿಷಯಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ಮಧ್ಯೆ ಘರ್ಷಣೆ ಜರುಗಿದ ಘಟನೆ ಚಿತ್ತಾಪುರ ತಾಲ್ಲೂಕಿನ ವಾಡಿ ಪಟ್ಟಣದ ಎಸಿಸಿ ಕಾಗಿಣಾ ಗೆಸ್ಟ್ ಹೌಸ್ ಬಳಿ ಸೋಮವಾರ ಮಧ್ಯಾಹ್ನ ಜರುಗಿದೆ.

ಘಟನೆಯಲ್ಲಿ 4 ಜನ ಗಾಯಗೊಂಡಿದ್ದಾರೆ. ಸುನೀಲ ಗುತ್ತೇದಾರ, ಕೃಷ್ಣ ಹೊಸಮನಿ, ಸೂರ್ಯಪ್ರಕಾಶ ಹಾಗೂ ಕಾರ್ತಿಕ್ ಅವರು ಗಾಯಗೊಂಡಿದ್ದು ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕಾರ್ಖಾನೆಗೆ ಕಾರ್ಮಿಕರನ್ನು ಪೂರೈಸುವ ವಿಚಾರಕ್ಕೆ ಸಂಬಂಧಿಸಿದಂತೆ ಜರುಗಿದ ವಾಗ್ವಾದ ನಂತರ ಕೈ-ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಕೈಯಲ್ಲಿ ಬ್ಲೇಡು, ಚಾಕುಗಳನ್ನು ಹಿಡಿದುಕೊಂಡು ಹೊಡೆದಾಡಿಕೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿ 9 ಜನರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಘಟನಾ ಸ್ಥಳಕ್ಕೆ ಎಸ್ಪಿ ಅಡ್ಡೂರು ಶ್ರೀನಿವಾಸಲು, ಡಿವೈಎಸ್ಪಿ ಶಂಕರಗೌಡ ಪಾಟೀಲ ಸಿಪಿಐ ಚಂದ್ರಶೇಖರ ತಿಗಡಿ, ಸ್ಥಳೀಯ ಪಿಎಸ್ಐ ತಿರುಮಲೇಶ ಕುಂಬಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT