ವಾಡಿ (ಕಲಬುರಗಿ): ಚಿತ್ತಾಪುರ ತಾಲ್ಲೂಕಿನಲ್ಲಿ ಬುಧವಾರ ಬೆಳಿಗ್ಗೆಯಿಂದ ಗುಡುಗು ಮಿಂಚು ಸಮೇತ ಆರಂಭಗೊಂಡ ಮಳೆಯು ನಾನಾ ಅವಾಂತರ ಸೃಷ್ಟಿಸಿದೆ.

ಚಿತ್ತಾಪುರ ತಾಲ್ಲೂಕಿನ ಲಾಡ್ಲಾಪುರ ಗ್ರಾಮದ ದಲಿತರ ಬಡಾವಣೆಯಲ್ಲಿ ಬುಧವಾರ ಬೆಳಗಿನ ಜಾವ 4 ವಿದ್ಯುತ್ ಕಂಬಗಳು ಉರುಳಿ ಬಿದ್ದಿದ್ದು ಸ್ಥಳೀಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದ್ಯಾವಪ್ಪ ನಡಿಗೇರಿ ಅವರ ಮನೆ ಮೇಲೆಯೇ ವಿದ್ಯುತ್ ಕಂಬ ಬಿದ್ದಿದ್ದು ಅದೃಷ್ಟವಶಾತ ಯಾವುದೇ ಅವಘಡ ಸಂಭವಿಸಿಲ್ಲ. ಬಡಾವಣೆಯಲ್ಲಿ ವಿದ್ಯುತ್ ತಂತಿಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು ಸ್ಥಳೀಯರು ಮನೆಯಿಂದ ಹೊರಗೆ ಬರಲು ಹೆದರುವಂತಾಯಿತು.

ಕಂಬಗಳು ಶಿಥಿಲಗೊಂಡಿದ್ದು ಯಾವುದೇ ಕ್ಷಣದಲ್ಲೂ ಬಿದ್ದು ಅಪಘಾತ ಉಂಟಾಗುತ್ತದೆ. ಕೂಡಲೇ ದುರಸ್ತಿ ಮಾಡಿ ಎಂದು ಆರು ತಿಂಗಳಿಂದ ಹೇಳುತ್ತಾ ಬರುತ್ತಿದ್ದೇವೆ. ಆದರೆ, ಜೆಸ್ಕಾಂ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.