ಶುಕ್ರವಾರ, ಡಿಸೆಂಬರ್ 2, 2022
19 °C

ಮಗನ ಮೇಲೆ ಎಫ್ಐಆರ್ ದಾಖಲಿಸುವ ಪ್ರಶ್ನೆಯೇ ಬರುವುದಿಲ್ಲ: ಡಿಸಿಎಂ ಸವದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

 ಉಪಮುಖ್ಯಮಂತ್ರಿ ಲಕ್ಷ್ಮಣ ‌ಸವದಿ –ಸಾಂದರ್ಭಿಕ ಚಿತ್ರ

ಕಲಬುರ್ಗಿ: 'ಬಾಗಲಕೋಟೆ ಜಿಲ್ಲೆಯ ‌ಹುನಗುಂದ ಬಳಿ ವ್ಯಕ್ತಿಯೊಬ್ಬರಿಗೆ ಡಿಕ್ಕಿ ಹೊಡೆದು ಸಾವಿಗೆ ‌ಕಾರಣವಾದ ಕಾರಿನಲ್ಲಿ ನನ್ನ ಮಗ ಚಿದಾನಂದ ‌ಇರಲಿಲ್ಲ. ಹೀಗಾಗಿ ಆತನ ವಿರುದ್ಧ ಎಫ್ಐಆರ್ ದಾಖಲಿಸಲು ಬರುವುದಿಲ್ಲ' ‌ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ‌ಸವದಿ ಸ್ಪಷ್ಟಪಡಿಸಿದರು.

ನಗರದ ವಿಮಾನ ನಿಲ್ದಾಣದಲ್ಲಿ ಬುಧವಾರ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳವಾರ ನಡೆದ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು ದುರದೃಷ್ಟಕರ. ನನ್ನ ಮಗ ಚಿದಾನಂದ ಮುಂದಿನ ಫಾರ್ಚುನರ್ ಕಾರಿನಲ್ಲಿ ಇದ್ದರು. ಹಿಂದಿನ ಕಾರು ಡಿಕ್ಕಿ ಹೊಡೆದಿದೆ. ಎಫ್ಐಆರ್ ನಿಂದ ಚಿದಾನಂದನ ಹೆಸರು ಕೈಬಿಡಲಾಗಿದೆ ಎಂಬ ಆರೋಪ ಸರಿಯಲ್ಲ. ಈ ಬಗ್ಗೆ ತನಿಖೆ ನಡೆಯುತ್ತಿದ್ದು, ಸತ್ಯ ಏನೆಂಬುದು ಗೊತ್ತಾಗಲಿದೆ.

ಇದರಲ್ಲಿ ರಾಜಕೀಯ ಮಾಡಲಾಗುತ್ತಿದೆ. ಇದರ ಹಿಂದೆ ಯಾರಿದ್ದಾರೆ ಎಂಬುದನ್ನು ಎರಡು ದಿನಗಳಲ್ಲಿ ಬಹಿರಂಗ ಮಾಡುತ್ತೇನೆ ಎಂದರು.

ಇಂದಿನಿಂದಲೇ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹೆಸರನ್ನು ಕಲ್ಯಾಣ ಕರ್ನಾಟಕ ಸಾರಿಗೆ ಎಂದು ಬದಲಾಯಿಸುತ್ತೇವೆ ಎಂದು ಸಾರಿಗೆ ಖಾತೆಯನ್ನೂ ಹೊಂದಿರುವ ಲಕ್ಷ್ಮಣ ಸವದಿ ತಿಳಿಸಿದರು.

ಇದನ್ನೂ ಓದಿ: ಪೊಲೀಸರು ಸ್ಥಳಕ್ಕೆ ಹೋದಾಗ ಚಿದಾನಂದ ಸವದಿ ಸ್ಥಳದಲ್ಲಿಯೇ ಇದ್ದರು: ಬಾಗಲಕೋಟೆ ಎಸ್ಪಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು