ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನ ಪರಿಷತ್‌ ಚುನಾವಣೆ: 7ರ ಬಳಿಕ ಅಭ್ಯರ್ಥಿಗಳ ತೀರ್ಮಾನ- ಎಚ್‌.ಡಿ.ಕುಮಾರಸ್ವಾಮಿ

Published 4 ಮೇ 2024, 23:35 IST
Last Updated 4 ಮೇ 2024, 23:35 IST
ಅಕ್ಷರ ಗಾತ್ರ

ಕಲಬುರಗಿ: ‘ವಿಧಾನ ಪರಿಷತ್ತಿನ ಮೂರು ಪದವೀಧರರ ಹಾಗೂ ಮೂರು ಶಿಕ್ಷಕರ ಕ್ಷೇತ್ರಗಳ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಮತ್ತು ಜೆಡಿಎಸ್‌ನಲ್ಲಿ ಸಾಕಷ್ಟು ಆಕಾಂಕ್ಷಿಗಳಿದ್ದಾರೆ. ಚುನಾವಣಾ ಕಣಕ್ಕೆ ಯಾರು ನಿಲ್ಲಬೇಕು ಎಂಬುದನ್ನು ಲೋಕಸಭಾ ಚುನಾವಣೆಯ ನಂತರವೇ ತೀರ್ಮಾನಿಸಲಾಗುವುದು’ ಎಂದು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ನಗರದಲ್ಲಿ ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ವಿಧಾನ ಪರಿಷತ್ ಚುನಾವಣೆಯಲ್ಲಿ ಕೆಲವರು ಹೊಂದಾಣಿಕೆ ಆಗಬೇಕು ಎನ್ನುತ್ತಿದ್ದಾರೆ. ಉಭಯ ಪಕ್ಷಗಳಲ್ಲಿ ಸ್ಪರ್ಧೆಯೂ ಹೆಚ್ಚಾಗಿದ್ದು, ಮೇ 7ರ ನಂತರ ಒಟ್ಟಿಗೆ ಕುಳಿತು ತೀರ್ಮಾನ ಮಾಡುತ್ತೇವೆ’ ಎಂದರು.

‘ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಸಂತ್ರಸ್ತರಿಗೆ ನ್ಯಾಯಕೊಡಿಸಬೇಕು ಎನ್ನುವುದಕ್ಕಿಂತ ಹೆಚ್ಚಾಗಿ ಸರ್ಕಾರಕ್ಕೆ ಪ್ರಚಾರ ಬೇಕಿದೆ. 2021ರಲ್ಲಿನ ಯಾವುದೋ ಒಬ ಹೆಣ್ಣು ಮಗಳ ಹೇಳಿಕೆಯನ್ನು ರಹಸ್ಯವಾಗಿ ನ್ಯಾಯಾಧೀಶರ ಮುಂದೆ ಕೊಡಿಸಿದ್ದಾರೆ. ಆದರೆ, ಗೃಹ ಸಚಿವರು ‘ನಮ್ಮ ಮೇಲೆ ಯಾವುದೇ ರೀತಿಯ ಅನುಮಾನ ಬರಬಾರದು’ ಎಂದಿದ್ದಾರೆ. ಹಾಗಿದ್ದರೆ, ನ್ಯಾಯಾಧೀಶರ ಮುಂದೆ ಮಹಿಳೆ ಹೇಳಿಕೆ ಕೊಟ್ಟಿದ್ದನ್ನು ಮಾಧ್ಯಮಗಳಿಗೆ ತಲುಪಿಸಿದವರು ಯಾರು’ ಎಂದು ಪ್ರಶ್ನಿಸಿದರು.

‘ನಾಲ್ಕು ಗೋಡೆಗಳ ಮಧ್ಯೆ ಇರಬೇಕಾದ ರಹಸ್ಯ ಮಾಧ್ಯಮದ ಮುಂದೆ ಏಕೆ ಬಂತು? ಈ ರೀತಿ ಸೋರಿಕೆ ಮಾಡುವ ಮೂಲಕ ತನಿಖೆಯಲ್ಲಿ ಸತ್ಯಾಂಶ ಹೊರತರುತ್ತೀರಾ? ಇದೆಲ್ಲವನ್ನು ಜನರ ಮುಂದೆ ಬಿಡುತ್ತೇನೆ. ಕಾಂಗ್ರೆಸ್ಸಿಗರು ಏನೇ ಅಪಪ್ರಚಾರ ಮಾಡಿದರೂ ಪ್ರಯೋಜನ ಆಗುವುದಿಲ್ಲ. ಹಾಸನ ಪ್ರಕರಣದಲ್ಲಿ ಮೋದಿ ಅವರನ್ನು ತಳಕು ಹಾಕಿದ್ದ ಹಾಗೂ ಶಾಸಕ ರಾಜು ಕಾಗೆ ಹೇಳಿಕೆ ಬಿಜೆಪಿಗೆ ವರವಾಗಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT