ಜೇವರ್ಗಿ: ತಾಲ್ಲೂಕಿನ ಸೊನ್ನ ಗ್ರಾಮದ ಹೊರವಲಯದಲ್ಲಿರುವ ಯಲ್ಲಮ್ಮನ ಕೊಳ್ಳದ ಹತ್ತಿರ ಭಾನುವಾರ ಬೆಳಿಗ್ಗೆ ಸಾಕುನಾಯಿ ಮೇಲೆ ಚಿರತೆ ದಾಳಿ ಮಾಡಿದೆ.

ರೈತ ಶಿಲೇಮಾನ್ ಕಾಸಿಂಸಾಬ್ ಶೇಕ್ ಸಿಂದಗಿ ಅವರ ಜಮೀನಿನಲ್ಲಿ ಸಾಕಿದ್ದ ನಾಯಿಯ ಮೇಲೆ ಚಿರತೆ ದಾಳಿ ಮಾಡಿ ಕೊಂದಿದೆ ಎನ್ನಲಾಗಿದೆ. ಕಾಣೆಯಾದ ನಾಯಿ ಹುಡುಕುವ ಸಂದರ್ಭದಲ್ಲಿ ಯಲ್ಲಮ್ಮನ ಕೊಳ್ಳದ ಹತ್ತಿರ ಚಿರತೆ ಹೆಜ್ಜೆ ಗುರುತು, ರಕ್ತದ ಗುರುತು ಕಂಡು ಬಂದಿದೆ.

ಘಟನೆ ಬಗ್ಗೆ ಮಾಹಿತಿ ಪಡೆದ ಉಪವಲಯ ಅರಣ್ಯ ಅಧಿಕಾರಿ ಸಚಿನ್ ಬಿರಾದಾರ ಹಾಗೂ ಗಸ್ತು ಅರಣ್ಯ ಪಾಲಕ ಮಲ್ಲಿನಾಥ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದು, ಕೂಡಲೇ ಚಿರತೆ ಸೆರೆ ಹಿಡಿಯಲು ಅರಣ್ಯಾಧಿಕಾರಿಗಳು ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260316-31-1301481290

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.