ಬುಧವಾರ, ಸೆಪ್ಟೆಂಬರ್ 28, 2022
26 °C

ಕೃಷಿ ಕಾಲೇಜಿನಲ್ಲಿ ಗ್ರಂಥಪಾಲಕರ ದಿನಾಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರಗಿ: ಇಲ್ಲಿನ ಆಳಂದ ರಸ್ತೆಯ ಕೃಷಿ ಕಾಲೇಜಿನಲ್ಲಿ ಇತ್ತೀಚೆಗೆ ಡಾ.ಎಸ್.ಆರ್. ರಂಗನಾಥನ್ ಅವರ 130ನೇ ಜನ್ಮದಿನದ ಪ್ರಯುಕ್ತ ಗ್ರಂಥಪಾಲಕರ ದಿನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೃಷಿ ಕಾಲೇಜಿನ ಡೀನ್ ಡಾ.ಎಂ.ಎಂ. ಧನೋಜಿ ಮಾತನಾಡಿ, ‘ರಂಗನಾಥನ್ ಅವರು ಗಣಿತಶಾಸ್ತ್ರದಲ್ಲಿ ಪದವಿಯನ್ನು ಪಡೆದು ಗ್ರಂಥಾಲಯ ವರ್ಗೀಕರಣ ಮಾಡಿ ಓದುಗರಿಗೆ ತಮಗೆ ಬೇಕಾದ ವಿಷಯ ಗ್ರಂಥಗಳನ್ನು ಸರಳವಾಗಿ ಸಿಗುವಂತೆ ಮಾಡಿದರುಉ. ಪ್ರತಿಯೊಬ್ಬರೂ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಗ್ರಂಥಾಲಯವು ಜ್ಞಾನದ ಕೇಂದ್ರ, ಕಾಲೇಜಿನ ಹೃದಯ’ ಎಂದು ಬಣ್ಣಿಸಿದರು.

ಮುಖ್ಯ ಅತಿಥಿಯಾಗಿ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ರಾಜು ತೆಗ್ಗಳ್ಳಿ, ಝಡ್‌ಎಆರ್‌ಎಸ್‌ ಡಾ.ಬಿ.ಎಂ. ದೊಡ್ಡಮನಿ, ಸಹಾಯಕ ಗ್ರಂಥಪಾಲಕಿ ಡಾ.ಶಿಲ್ಪಾ ಉಪಳಾಂವಕರ್ ಅತಿಥಿಗಳನ್ನು ಸ್ವಾಗತಿಸಿದರು. ಗ್ರಂಥಾಲಯ ಸಹಾಯಕಿ ಡಾ.ಮಂಜುಳಾ ವಿ.  ಕಟ್ಟಿಮನಿ ಪ್ರಾರ್ಥನಾ ಗೀತೆ ಹಾಡಿದರು. ಡಾ.ಡಿ.ಎಸ್. ವಗ್ಗಿ ಕಾರ್ಯಕ್ರಮ ನಿರೂಪಿಸಿದರು. ಡಾ. ಏಕನಾಥ ರಾಠೋಡ ವಂದಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು