ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸ್ವಸ್ಥ ಭಾರತ್‌’ ಯಶಸ್ಸಿಗೆ ಕೈಜೋಡಿಸಿ’

Last Updated 26 ಅಕ್ಟೋಬರ್ 2021, 4:42 IST
ಅಕ್ಷರ ಗಾತ್ರ

ಕಲಬುರಗಿ: ಉತ್ತರ ಪ್ರದೇಶದ ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಚಾಲನೆ ನೀಡಿದ ‘ಪ್ರಧಾನ ಮಂತ್ರಿ ಆತ್ಮನಿರ್ಭರ ಸ್ವಸ್ಥ ಭಾರತ್ ಯೋಜನೆ (ಪಿಎಂಎಎಸ್‌ಬಿವೈ)’ ಕಾರ್ಯಕ್ರಮವನ್ನು ಜಿಮ್ಸ್‌ನ ಕೇಂದ್ರ ಗ್ರಂಥಾಲಯದಲ್ಲಿ ನೇರ ಪ್ರಸಾರ ಮಾಡಲಾಯಿತು.

ಕೇಂದ್ರ ಆರೋಗ್ಯ ಸಚಿವಾಲಯದಿಂದ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮದಲ್ಲಿ ಕಲಬುರಗಿಯಿಂದ ಸಂಸದ ಡಾ.ಉಮೇಶ ಜಾಧವ ಭಾಗವಹಿಸಿದರು.

‘ನವ ಭಾರತ ನಿರ್ಮಾಣಕ್ಕಾಗಿ ಹಗಲು–ರಾತ್ರಿ ಶ್ರಮವಹಿಸಬೇಕು. ಪ್ರಧಾನಿ ಮೋದಿ ಅವರ ನಿರ್ದೇಶನದಂತೆ ನಾವೆಲ್ಲರೂ ನಡೆಯೋಣ. ಜನರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರವು ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಅದರ ಲಾಭವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು’ ಎಂದು ಸಂಸದ ಹೇಳಿದರು.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಆರ್.ವೆಂಕಟೇಶಕುಮಾರ್, ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ದಿಲೀಶ್‌ ಶಶಿ, ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ್ ಲೋಖಂಡೆ, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶರಣಬಸಪ್ಪ ಗಣಜಲಖೇಡ್, ಜಿಮ್ಸ್ ನಿರ್ದೇಶಕಿ ಡಾ.ಕವಿತಾ ಪಾಟೀಲ, ಜಿಮ್ಸ್‌ ಅಧೀಕ್ಷಕ ಶಫಿಯುದ್ದಿನ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಅಂಬರಾಯ ಎಸ್. ರುದ್ರವಾಡಿ, ಕಲಬುರಗಿ ಭಾರತೀಯ ವೈದ್ಯಕೀಯ ಸಂಘದ ಪದಾಧಿಕಾರಿಗಳು, ಖಾಸಗಿ ವೈದ್ಯರು ಸೇರಿದಂತೆ ಅರೋಗ್ಯ ಇಲಾಖೆಯ ಹಾಗೂ ಜಿಮ್ಸ್ ಕಾಲೇಜಿನ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT