ಶುಕ್ರವಾರ, ಜುಲೈ 30, 2021
21 °C
ಮಧ್ಯಾಹ್ನ 2ವರೆಗೆ ಅಗತ್ಯ ವಸ್ತುಗಳ ಮಾರಾಟಕ್ಕೆ ಅವಕಾಶ, ಜನಸಂದಣಿ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

ಕಲಬುರ್ಗಿ: ಲಾಕ್‌ಡೌನ್‌ ಮತ್ತೆ ಒಂದು ವಾರ ವಿಸ್ತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ಕೋವಿಡ್ ಸೋಂಕು ಹತೋಟಿ ತರುವ ಉದ್ದೇಶದಿಂದ ಜಿಲ್ಲೆಯಲ್ಲಿ ಲಾಕ್‌ಡೌನ್‌ ಅನ್ನು ಮತ್ತೊಂದು ವಾರ (ಜುಲೈ 27ರವರೆಗೆ) ವಿಸ್ತರಣೆ ಮಾಡಲಾಗಿದೆ.

ಈ ಬಗ್ಗೆ ಭಾನುವಾರ ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ ಬಿ.ಶರತ್‌, ‘ನಗರದಲ್ಲೇ ವೈರಾಣು ಹರಡುವಿಗೆ ವ್ಯಾಪಕವಾದ ಹಿನ್ನೆಲೆಯಲ್ಲಿ ಜುಲೈ 14ರಿಂದ 20ರವರೆಗೆ ಲಾಕ್‌ಡೌನ್‌ ಮಾಡಲಾಗಿತ್ತು. ಆದರೆ, ಇನ್ನೂ ಹತೋಟಿಗೆ ಬರದ ಕಾರಣ ಮತ್ತೊಂದು ವಾರ ವಿಸ್ತರಣೆ ಮಾಡಲಾಗಿದೆ’ ಎಂದು ತಿಳಿಸಿದ್ದಾರೆ.

ಕಳೆದ ವಾರ ಕಲಬುರ್ಗಿ ನಗರ ಹಾಗೂ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಆದೇಶ ಮಾಡಲಾಗಿತ್ತು. ಮರು ಆದೇಶ ಕೂಡ ಹಾಗೆಯೇ ಇದೆ. ಹಳ್ಳಿಗಳಲ್ಲಿ ಮಾತ್ರ ಇದು ಅನ್ವಯ ಆಗುವುದಿಲ್ಲ. ನಗರಕ್ಕೆ ಬರುವವರು, ಒಂದು ಪಟ್ಟಣದಿಂದ ಮತ್ತೊಂದು ಪಟ್ಟಣಕ್ಕೆ ಹೋಗುವುದು, ನಗರದಿಂದ ಹಳ್ಳಿಗಳಿಗೆ ಹೋಗುವುದನ್ನು ಕೂಡ ನಿಷೇಧಿಸಲಾಗಿದೆ ಎಂದೂ ತಿಳಿಸಲಾಗಿದೆ.

ಅಗತ್ಯ ವಸ್ತುಗಳಿಗೆ ಅವಕಾಶ: ವಾರದ ಆರು ದಿನ ಬೆಳಿಗ್ಗೆ 6ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅಗತ್ಯ ವಸ್ತುಗಳ ಮಾರಾಟ ಮಾಡಲು ಅವಕಾಶ ನೀಡಲಾಗಿದೆ. ಈ ಸಮಯದಲ್ಲಿ ಅಂಗಡಿಗಳನ್ನು ತೆರೆದು ವ್ಯಾಪಾರ ಮಾಡಬಹುದು. ಮಾಸ್ಕ್‌, ಸ್ಯಾನಿಟೈಸರ್‌, ಅಂತರ ಕಾಪಾಡುವುದು ಕಡ್ಡಾಯವಾಗಿದೆ.

ಉಳಿದಂತೆ ಅಗತ್ಯ ಸೇವೆಗಳಾದ ಆಸ್ಪತ್ರೆ, ಔಷಧ ಮಳಿಗೆ, ಪೆಟ್ರೋಲ್‌ ಬಂಕ್‌ಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ತಿಳಿಸಲಾಗಿದೆ. ಭಾನುವಾರದ ಲಾಕ್‌ಡೌನ್‌ ಎಂದಿನಂತೆ ಇರಲಿದೆ ಎಂದೂ ಸ್ಪಷ್ಟಪಡಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು