ಬುಧವಾರ, 19 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೇಡಂ: ಲೋಕ ಅದಾಲತ್‌ ಪೂರ್ವಭಾವಿ ಸಭೆ

Published 7 ಜೂನ್ 2024, 15:58 IST
Last Updated 7 ಜೂನ್ 2024, 15:58 IST
ಅಕ್ಷರ ಗಾತ್ರ

ಸೇಡಂ: ಪಟ್ಟಣದ ನ್ಯಾಯಾಲಯದ ಸಭಾಂಗಣದಲ್ಲಿ ಶುಕ್ರವಾರ ಹಿರಿಯ ಸಿವಿಲ್ ನ್ಯಾಯಾಧೀಶ ಸಾಗರ ಗುರುಗೌಡ ಪಾಟೀಲ ಮತ್ತು ಸಿವಿಲ್ ನ್ಗಾಯಾಧೀಶೆ ಲಲಿತಾ ಕುದುರಿಮತಿ ಅಧ್ಯಕ್ಷತೆಯಲ್ಲಿ ಲೋಕ ಅದಾಲತ್‌ನ ಪೂರ್ವಭಾವಿ ಸಭೆ ಜರುಗಿತು.

‘ಜೂನ್ 13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು ವಿವಿಧ ಇಲಾಖೆಗಳ ಅಧಿಕಾರಿಗಳು ಅದಾಲತ್‌ನಲ್ಲಿ ವಿವಿಧ ಪ್ರಕರಣಗಳತ್ತ ಗಮನ ಹರಿಸಬೇಕು. ಲೋಕ ಅದಾಲತ್‌ನಲ್ಲಿ ಇತ್ಯರ್ಥಪಡಿಸಬಹುದಾದ ಪ್ರಕರಣಗಳನ್ನು ಆದಷ್ಟು ಶೀಘ್ರವೇ ಗಮನ ಹರಿಸಿ,ಶೀಘ್ರವೇ ಇತ್ಯರ್ಥಪಡಿಸುವ ಕೆಲಸಗಳನ್ನು ಮಾಡಬೇಕು. ಇದರಿಂದ ಸಾರ್ವಜನಿಕರಿಗೆ ಅನುಕೂಲವಾಗುವುದಲ್ಲದೆ, ಪ್ರಕರಣಗಳ ಸಂಖ್ಯೆಯೂ ಕಡಿಮೆಯಾಗುತ್ತದೆ. ಇದರತ್ತ ಗಮನ ಹರಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಚನ್ನಪ್ಪ ರಾಯಣ್ಣನರ್, ಸಹಾಯಕ ಸರ್ಕಾರಿ ಅಭಿಯೋಜಕರು ಹನುಮಗೌಡ, ವಕೀಲರ ಸಂಘದ ಅಧ್ಯಕ್ಷ ಮಲ್ಲನಗೌಡ ಪಾಟೀಲ, ತಾಲ್ಲೂಕು ಕಾನೂನು ಸೇವಾ ಸಮಿತಿ ಆಡಳಿತ ಸಹಾಯಕ ದುರ್ಗಾರೆಡ್ಡಿ, ಮುಧೋಳ ಪೊಲೀಸ್ ಠಾಣೆ ಪಿಐ ದೌಲತ್, ಸೇಡಂ ಪಿಎಸ್ಐ(ಕ್ರೈಂ) ಚಂದ್ರಶೇಖರ, ವಿಜಯಕುಮಾರ, ಶಶಕಾಂತ, ಶರಣಬಸವ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT