ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನರ ಹಿತಾಸಕ್ತಿಗಾಗಿ ಗ್ಯಾರಂಟಿ ಯೋಜನೆ ಜಾರಿ: ಸಚಿವ ಡಾ. ಶರಣಪ್ರಕಾಶ ಪಾಟೀಲ

ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ವಿಶ್ವಾಸ
Published 29 ಮಾರ್ಚ್ 2024, 15:29 IST
Last Updated 29 ಮಾರ್ಚ್ 2024, 15:29 IST
ಅಕ್ಷರ ಗಾತ್ರ

ಜೇವರ್ಗಿ: ‘ಪಕ್ಷದ ಅಭ್ಯರ್ಥಿ ಗೆಲುವಿಗೆ ಕಾರ್ಯಕರ್ತರ ಸಹಕಾರ ಅಗತ್ಯವಾಗಿದೆ. ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಜತೆಗೆ ಜನ ಹಿತಾಸಕ್ತಿ ಬಯಸಿದ್ದು ಆ ನಿಟ್ಟಿನಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಜನರ ಸಂಕಷ್ಟಕ್ಕೆ ಸ್ಪಂದಿಸಿದೆ‘ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಹೇಳಿದರು.

ಶುಕ್ರವಾರ ಪಟ್ಟಣದ ಮಹಿಬೂಬ್ ಫಂಕ್ಷನ್ ಹಾಲ್‌ನಲ್ಲಿ ಲೋಕಸಭೆ ಚುನಾವಣೆ ನಿಮಿತ್ತ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ಅಭಿವೃದ್ಧಿ ಪರ ಚಿಂತನೆ ಹೊಂದದ ಬಿಜೆಪಿ ದುರಾಡಳಿತಕ್ಕೆ ಎಲ್ಲೆಡೆ ಜನಾಕ್ರೋಶ ವ್ಯಕ್ತವಾಗಿದ್ದು, ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಭಾರಿ ಬಹುಮತದಿಂದ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ‘ ಎಂದರು.

ಸಚಿವ ಶರಣಬಸಪ್ಪ ದರ್ಶನಾಪುರ ಮಾತನಾಡಿ, ‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಧಾನ ಮಂತ್ರಿ ಆಗುವ ಯೋಗ ಬಂದಿದ್ದು, ರಾಷ್ಟ್ರದಲ್ಲಿ ತಮ್ಮದೇಯಾದ ಛಾಪು ಮೂಡಿಸಿದ ಖರ್ಗೆ ಅವರ ಕೈ ಬಲಪಡಿಸಲು ಲೋಕಸಭಾ ಅಭ್ಯರ್ಥಿ ರಾಧಾಕೃಷ್ಣ ಅವರನ್ನು ಗೆಲ್ಲಿಸಬೇಕಾಗಿದೆ‘ ಎಂದು 

ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ‘ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬೆಲೆಗಳು ಗಗನಕ್ಕೆ ಏರಿವೆ. ಜನ ಸಾಮಾನ್ಯರ ಬದುಕು ದುಸ್ತರವಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿಗಳನ್ನು ಜನರಿಗೆ ನೀಡುವ ಮೂಲಕ ಜನ ಹಿತ ಕಾಪಾಡಿದೆ. ಜಿಲ್ಲೆಯ ಅಭಿವೃದ್ಧಿ ಬಗ್ಗೆ ಡಾ. ಉಮೇಶ ಜಾಧವ ಯಾವತ್ತೂ ಲೋಕಸಭೆಯಲ್ಲಿ ಧ್ವನಿ ಎತ್ತಲಿಲ್ಲ. ಈ ಭಾಗದಲ್ಲಿ ಬರಗಾಲ ದಿಂದ ರೈತಾಪಿ ವರ್ಗ, ಕೃಷಿ ಕಾರ್ಮಿಕರು ತತ್ತರಿಸಿ ಹೋಗಿದ್ದಾರೆ. ಜನರ ಬಗ್ಗೆ ಧ್ವನಿ ಎತ್ತದ ಜಾಧವ ಅವರು ಜನವಿರೋಧಿ ನೀತಿ ಅನುಸರಿಸಿದ್ದು, ಈ ಬಾರಿ ಜನರೆ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ‘ ಎಂದರು.

ಕೆಕೆಆರ್‌ಡಿಬಿ ಅಧ್ಯಕ್ಷ ಶಾಸಕ ಡಾ.ಅಜಯ್ ಸಿಂಗ್ ಮಾತನಾಡಿ, ‘ಸರಳ ಸ್ವಭಾವದ ವ್ಯಕ್ತಿತ್ವ ಹೊಂದಿದ ರಾಧಾಕೃಷ್ಣ ಅವರ ಗೆಲುವು ನಮ್ಮೆಲ್ಲರ ಗೆಲುವು. ಅಭಿವೃದ್ಧಿ ಪರ ಚಿಂತನೆ ಹೊಂದಿದ ಅವರನ್ನು ಗೆಲ್ಲಿಸಲು ನಾವೆಲ್ಲರೂ ಸಂಕಲ್ಪ ತೊಡಬೇಕಾಗಿದೆ‘ ಎಂದು ಹೇಳಿದರು.

ಮಾಜಿ ಸಚಿವ ರೇವು ನಾಯಕ ಬೆಳಮಗಿ, ಬಾಬುರಾವ ಚಿಂಚನಸೂರ, ಶಾಸಕರಾದ ಎಂ.ವೈ. ಪಾಟೀಲ, ಅಲ್ಲಮಪ್ರಭು ಪಾಟೀಲ, ತಿಪ್ಪಣ್ಣಪ್ಪ ಕಮಕನೂರ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ, ಸುಭಾಷ ರಾಠೋಡ, ಬಾಗನಗೌಡ ಸಂಕನೂರ, ಸಿದ್ದಲಿಂಗ ರಡ್ಡಿ ಇಟಗಿ, ರುಕುಂ ಪಟೇಲ್ ಇಜೇರಿ, ಕೇದಾರಲಿಂಗಯ್ಯ ಹಿರೇಮಠ, ನೀಲಕಂಠರಾವ ಮೂಲಗೆ, ರಾಜಶೇಖರ ಸೀರಿ, ಚಂದ್ರಶೇಖರ ಪುರಾಣಿಕ, ಗುರುಲಿಂಗಪ್ಪಗೌಡ ಆಂದೋಲಾ, ಸಕ್ರೆಪ್ಪಗೌಡ ಹರನೂರ, ಶರಣಕುಮಾರ ಮೋದಿ, ವಿಜಯಕುಮಾರ ಪಾಟೀಲ, ಮಾಜೀದ್‌ ಸೇಠ ಗಿರಣಿ, ಸುದರ್ಶನ ಆಲಬಾಳ, ಖಾಸಿಂ ಪಟೇಲ್ ಮುದಬಾಳ, ಅಬ್ದುಲ್ ರಹಿಮಾನ ಪಟೇಲ್, ಚಂದ್ರಶೇಖರ ಹರನಾಳ, ಶಾಂತಪ್ಪ ಕೂಡಲಗಿ, ಮಲ್ಲಿಕಾರ್ಜುನ ಬೂದಿಹಾಳ ಸೇರಿದಂತೆ ನೂರಾರು ಕಾರ್ಯಕರ್ತರು, ಮಹಿಳೆಯರು ಪಾಲ್ಗೊಂಡಿದ್ದರು.

ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರೇ ಜೀವಾಳವಾಗಿದ್ದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಜನಪರ ಯೋಜನೆಗಳನ್ನು ಮನವರಿಕೆ ಮಾಡಿಕೊಟ್ಟು ಮತದಾರರ ಮನವೊಲಿಸಬೇಕು
ರಾಧಾಕೃಷ್ಣ ದೊಡ್ಡಮನಿ ಕಾಂಗ್ರೆಸ್ ಅಭ್ಯರ್ಥಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT