ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ ಲೋಕಸಭಾ ಕ್ಷೇತ್ರ | ಮಾ.31 ರಂದು ಅಫಜಲಪುರಕ್ಕೆ ರಾಧಾಕೃಷ್ಣ ಆಗಮನ

Published 29 ಮಾರ್ಚ್ 2024, 15:32 IST
Last Updated 29 ಮಾರ್ಚ್ 2024, 15:32 IST
ಅಕ್ಷರ ಗಾತ್ರ

ಅಫಜಲಪುರ: ‘ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಮಾ.31 ರಂದು ಸಂಜೆ 4 ಗಂಟೆಗೆ ಅಫಜಲಪುರ ಪಟ್ಟಣದ ನ್ಯಾಷನಲ್ ಫಂಕ್ಷನ್ ಮೈದಾನದಲ್ಲಿ ಆಯೋಜಿಸಿರುವ ಕಾರ್ಯಕರ್ತರ ಸಭೆಗೆ ಆಗಮಿಸುತ್ತಿದ್ದಾರೆ’ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅರುಣ ಕುಮಾರ್ ಎಂ. ಪಾಟೀಲ ತಿಳಿಸಿದರು.

ಪಟ್ಟಣದ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಧಾಕೃಷ್ಣ ಅವರು ಅಭ್ಯರ್ಥಿಯಾಗಿ ಪ್ರಥಮ ಬಾರಿಗೆ ಆಗಮಿಸುತ್ತಿರುವುದರಿಂದ ಪಕ್ಷದ ವತಿಯಿಂದ ವಿಶೇಷ ಸನ್ಮಾನ ಮಾಡಲಾಗುತ್ತದೆ. ಪಕ್ಷದ ಎಲ್ಲಾ ಮುಂಚೂಣಿ ಘಟಕಗಳ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಗೆ ಆಗಮಿಸಬೇಕು’ ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಶರಣು ಕುಂಬಾರ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪ್ರಕಾಶ್ ಜಮಾದಾರ್, ಸಿದ್ದಾರ್ಥ ಬಸರಿಗಿಡದ, ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಅಂಬರೀಶ್ ಬರಲಿ, ಮಹಾಲಿಂಗ ಅಂಗಡಿ, ನಗರ ಘಟಕದ ಅಧ್ಯಕ್ಷ ಮಜಿದ್ ಪಟೇಲ್ ಮತ್ತಿತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT