ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶಹಾಬಾದ್‌ | ಚುನಾವಣೆ ಕಾವು: ಚೆಕ್‌ಪೋಸ್ಟ್‌ಗಳಲ್ಲಿ ಖಾಕಿ ಹದ್ದಿನ ಕಣ್ಣು

Published 19 ಮಾರ್ಚ್ 2024, 14:12 IST
Last Updated 19 ಮಾರ್ಚ್ 2024, 14:12 IST
ಅಕ್ಷರ ಗಾತ್ರ

ಶಹಾಬಾದ್‌: ತಾಲ್ಲೂಕಿನ ಭಂಕೂರ ಗ್ರಾಮದ ಬಳಿ ಕಲಬುರಗಿ ಮುಖ್ಯ ರಸ್ತೆಯಲ್ಲಿ ಚೆಕ್‌ಪೋಸ್ಟ್ ನಿರ್ಮಿಸಲಾಗಿದ್ದು, ಅಧಿಕಾರಿಗಳು  ವಾಹನಗಳ ಕಟ್ಟುನಿಟ್ಟಿನ ತಪಾಸಣೆ ಆರಂಭಿಸಿದ್ದಾರೆ.

ರಾಜ್ಯದಲ್ಲಿ ಲೋಕಸಭೆ ಚುನಾವಣೆ ಕಾವು ಆರಂಭವಾಗಿದೆ. ಪಕ್ಷಗಳು ಹಾಗೂ ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆಲುವಿಗಾಗಿ ಕಸರತ್ತು ಆರಂಭಿಸಿದ್ದಾರೆ. ಗೃಹ ಬಳಕೆ ಸಾಮಾನು ಹಾಗೂ ಹಣದ ಮೂಲಕ ಮತದಾರನನ್ನು ಸೆಳೆಯಲು ಪೈಪೋಟಿ ಆರಂಭವಾಗಿದೆ. ಇಂತಹ ಕೃತ್ಯಗಳಿಗೆ ಕಡಿವಾಣ ಹಾಕಲು ಅಧಿಕಾರಿಗಳು ಚೆಕ್‌ಪೋಸ್ಟ್‌ ನಿರ್ಮಿಸಿದ್ದಾರೆ. ಬೈಕ್, ಆಟೋ, ಲಾರಿ, ಬಸ್, ಕಾರು ಸೇರಿದಂತೆ ಎಲ್ಲ ವಾಹನಗಳ ಪರಿಶೀಲನೆ ಮಾಡುತ್ತಿದ್ದಾರೆ.

ವಾಹನಗಳ ತಪಾಸಣೆ ವೇಳೆ ಕಂದಾಯ ಇಲಾಖೆ ತಹಶೀಲ್ದಾರ್ ಮಲಶೆಟ್ಟಿ ಚಿದ್ರೆ, ಡಿವೈಎಸ್‌ಪಿ ಶಂಕರಗೌಡ ಪಾಟೀಲ, ಸಿಪಿಐ ನಟರಾಜ ಲಾಡೆ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಪಾಲ್ಗೊಂಡಿದ್ದರು.

ಚೆಕ್‌ಪೋಸ್ಟ್‌ನಲ್ಲಿ ಕಾರಿನ ತಪಾಸಣೆ ಮಾಡುತ್ತಿರುವ ತಹಶೀಲ್ದಾರ್‌ ಹಾಗೂ ಪೊಲೀಸ್‌ ಅಧಿಕಾರಿಗಳು
ಚೆಕ್‌ಪೋಸ್ಟ್‌ನಲ್ಲಿ ಕಾರಿನ ತಪಾಸಣೆ ಮಾಡುತ್ತಿರುವ ತಹಶೀಲ್ದಾರ್‌ ಹಾಗೂ ಪೊಲೀಸ್‌ ಅಧಿಕಾರಿಗಳು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT