ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಟ್ರಾಂಗ್‌ ರೂಮ್‌ನಲ್ಲಿ ಮತಯಂತ್ರ ಭದ್ರ

Published 9 ಮೇ 2024, 7:58 IST
Last Updated 9 ಮೇ 2024, 7:58 IST
ಅಕ್ಷರ ಗಾತ್ರ

ಕಲಬುರಗಿ: ಲೋಕಸಭಾ ಚುನಾವಣೆಯ ಕಲಬುರಗಿ ಎಸ್‌ಸಿ ಮೀಸಲು ಕ್ಷೇತ್ರದ ಮತದಾನದ ಬಳಿಕ ಎಲ್ಲ ಬ್ಯಾಲೆಟ್ ಬ್ಯಾಕ್ಸ್‌ಗಳನ್ನು ಗುಲಬರ್ಗಾ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಸ್ಥಾಪಿಸಿರುವ ಭದ್ರತಾ ಕೊಠಡಿಗಳಲ್ಲಿ ಇರಿಸಿ, ಬಿಗಿ ಭದ್ರತೆ ಕಲ್ಪಿಸಲಾಗಿದೆ.

ಕಲಬುರಗಿ ಉತ್ತರ, ಕಲಬುರಗಿ ದಕ್ಷಿಣ, ಕಲಬುರಗಿ ಗ್ರಾಮೀಣ, ಚಿತ್ತಾಪುರ, ಅಫಜಲಪುರ, ಜೇವರ್ಗಿ ಹಾಗೂ ಯಾದಗಿರಿ ಜಿಲ್ಲೆಯ ಗುರುಮಠಕಲ್ ಕ್ಷೇತ್ರಗಳಲ್ಲಿನ 2,166 ಮತಗಟ್ಟೆಗಳಲ್ಲಿನ ವಿದ್ಯುನ್ಮಾನ ಮತಯಂತ್ರಗಳನ್ನು ಪೊಲೀಸ್ ಸರ್ಪಗಾವಲಿನಲ್ಲಿ ತಂದು ಭದ್ರತಾ ಕೊಠಡಿಗಳಲ್ಲಿ ಸಂಗ್ರಹಿಸಿ ಇಡಲಾಗಿದೆ. 

ವಿಶ್ವವಿದ್ಯಾಲಯ ಕ್ಯಾಂಪಸ್‌ನ ವಿವಿಧ ವಿಭಾಗಗಳು, ಕಟ್ಟಡಗಳಲ್ಲಿನ ಸ್ಟ್ರಾಂಗ್ ರೂಮ್‌ಗಳಲ್ಲಿ ಮತ ಯಂತ್ರಗಳನ್ನು ಇರಿಸಲಾಯಿತು. ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಪೊಲೀಸ್ ಕಮಿಷನರ್ ಚೇತನ್ ಆರ್. ಸೇರಿದಂತೆ ಚುನಾವಣಾ ವೀಕ್ಷಕರು, ರಾಜಕೀಯ ಪಕ್ಷಗಳ ಮುಖಂಡರ ಸಮ್ಮುಖದಲ್ಲಿ ಭದ್ರತಾ ಕೊಠಡಿಗಳನ್ನು ಸೀಲ್‌ ಮಾಡಲಾಯಿತು.

ವಿಶ್ವವಿದ್ಯಾಲಯದ ಗಣಿತ ವಿಭಾಗದಲ್ಲಿ ಅಫಜಲಪುರ, ಪರೀಕ್ಷಾ ಕೇಂದ್ರದಲ್ಲಿ (ಸೆಲ್ಯುಲರ್ ಹಾಲ್) ಜೇವರ್ಗಿ, ಒಳಾಂಗಣ ಕ್ರೀಡಾಂಗಣದ ಬಲಗಡೆ ಗುರುಮಠಕಲ್ ಮತ್ತು ಎಡಗಡೆ ಕಲಬುರಗಿ ಉತ್ತರ, ಕನ್ನಡ ಅಧ್ಯಯನ ಕೇಂದ್ರದ ಹರಿಹರ ಸಭಾಂಗಣದಲ್ಲಿ ಸೇಡಂ, ಪರೀಕ್ಷಾ ಕೇಂದ್ರದಲ್ಲಿ ಚಿತ್ತಾಪುರ ಮತ್ತು ಕಲಬುರಗಿ ಗ್ರಾಮೀಣ ಹಾಗೂ ಸಸ್ಯವಿಜ್ಞಾನ ವಿಭಾಗದಲ್ಲಿ ಕಲಬುರಗಿ ದಕ್ಷಿಣ ಮತ ಕ್ಷೇತ್ರದ ಮತಯಂತ್ರಗಳನ್ನು ಇರಿಸಲಾಗಿದೆ. 

‘ಮತಯಂತ್ರಗಳನ್ನು ಇರಿಸಿದ ವಿಶ್ವವಿದ್ಯಾಲಯ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಮತಯತ್ರ ಇರಿಸಲಾದ ಭದ್ರತಾ ಕೇಂದ್ರಗಳ ವ್ಯಾಪ್ತಿಯಲ್ಲಿ ಸಾರ್ವಜನಿಕರು ಅನಗತ್ಯವಾಗಿ ಓಡಾಡಬಾರದು’ ಎಂದು ಪೊಲೀಸ್ ಕಮಿಷನರ್ ಚೇತನ್ ಆರ್. ತಿಳಿಸಿದರು.

ದೇಶದಾದ್ಯಂತ ಜೂನ್ 4ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದ್ದು, ಅಂದಿನವರೆಗೂ ಸ್ಟ್ರಾಂಗ್‌ ರೂಮ್‌ನಲ್ಲಿನ ಸೀಲ್ ಮಾಡಿದ ಕೊಠಡಿಗಳಿಗೆ ಹಗಲು– ರಾತ್ರಿ ನಿರಂತರ ಸಶಸ್ತ್ರ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT