ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೇಡಂ: ಏ.8 ರಂದು‌ ಚುನಾವಣಾ ಸಿಬ್ಬಂದಿಗೆ ತರಬೇತಿ

Published 7 ಏಪ್ರಿಲ್ 2024, 14:43 IST
Last Updated 7 ಏಪ್ರಿಲ್ 2024, 14:43 IST
ಅಕ್ಷರ ಗಾತ್ರ

ಸೇಡಂ: ‘ಪಟ್ಟಣ ಹೊರವಲಯದಲ್ಲಿರುವ ನೃಪತುಂಗ ಪ್ರಥಮ ದರ್ಜೆ ಕಾಲೇಜಿನಲ್ಲಿ ಏ.8 ರಂದು‌ ಸೋಮವಾರ ಬೆಳಿಗ್ಗೆ 9ಗಂಟೆಗೆ ಲೋಕಸಭಾ ಚುನಾವಣಾ ಸಿಬ್ಬಂದಿಗೆ ತರಬೇತಿ ಆಯೋಜಿಸಲಾಗಿದೆ’ ಎಂದು ಸಹಾಯಕ ಚುನಾವಣಾ ಅಧಿಕಾರಿ ಆಶಪ್ಪ ಪೂಜಾರಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಸೇಡಂ ಮತಕ್ಷೇತ್ರದ ಚುನಾವಣಾ ಸಿಬ್ಬಂದಿ ತರಬೇತಿ ಆಯೋಜಿಸಲಾಗಿದ್ದು, ಪಿ.ಆರ್.ಒ ಹಾಗೂ ಎ.ಪಿ.ಆರ್.ಒ ಗಳು ಕಡ್ಡಾಯವಾಗಿ ಹಾಜರಾಗಬೇಕು.‌ ತರಬೇತಿಗೆ ಆಗಮಿಸುವ ಸಿಬ್ಬಂದಿಗೆ ಸೇಡಂ ರೈಲ್ವೆ ನಿಲ್ದಾಣದಿಂದ ಬಸ್ಸಿನ ವ್ಯವಸ್ಥೆ ಮಾಡಲಾಗಿದ್ದು, ಬಸ್ ನಿಲ್ದಾಣದಿಂದ ಊಡಗಿ ಕ್ರಾಸ್ ಮೂಲಕ ನೃಪತುಂಗ ಪ್ರಥಮ ದರ್ಜೆ ಕಾಲೇಜಿಗೆ ಬಸ್ ತೆರಳಲಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT