ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭಾ ಚುನಾವಣೆ | ಎದುರಾಳಿ ಅಭ್ಯರ್ಥಿ ಬಗ್ಗೆ ವಿಚಾರವೇ ಮಾಡಲ್ಲ: ಉಮೇಶ ಜಾಧವ

Published 22 ಮಾರ್ಚ್ 2024, 8:06 IST
Last Updated 22 ಮಾರ್ಚ್ 2024, 8:06 IST
ಅಕ್ಷರ ಗಾತ್ರ

ಕಲಬುರಗಿ: ‘ಎದುರಾಳಿ ಅಭ್ಯರ್ಥಿ ಬಗ್ಗೆ ಎಂದಿಗೂ ವಿಚಾರವೇ ಮಾಡಲ್ಲ. ಚುನಾವಣೆ ಎಂದರೆ, ಚುನಾವಣೆಯಷ್ಟೇ. ಚುನಾವಣೆಯನ್ನು ನಾವು ಎಂದಿಗೂ ಹಗುರವಾಗಿ ಪರಿಗಣಿಸಿಲ್ಲ. ನಮ್ಮ ಗುರಿ ಒಂದೇ. ಅದು ಅಬ್‌ ಕಿ ಬಾರ್‌, 400 ಪಾರ್ (ಈ ಸಲ 400 ಸೀಟುಗಳ ಗಡಿ ದಾಟುವುದು)’ ಎಂದು ಕಲಬುರಗಿ ಲೋಕಸಭಾ ಕ್ಷೇತ್ರದ ಬಿಜೆಪಿ ನಿಯೋಜಿತ ಅಭ್ಯರ್ಥಿ ಡಾ.ಉಮೇಶ ಜಾಧವ ಹೇಳಿದರು.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಈ ಸಲ ಬದಲಾಗಿರುವ ಕುರಿತ ಪ್ರಶ್ನೆಗೆ ಮೇಲಿನಂತೆ ಉತ್ತರಿಸಿದರು.

ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ಅವರ ಹೆಸರನ್ನು ಗುರುವಾರ ರಾತ್ರಿಯಷ್ಟೇ ಘೋಷಿಸಲಾಗಿದೆ.

2019ರ ಲೋಕಸಭೆ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣದಲ್ಲಿದ್ದರು. ಎಐಸಿಸಿ ಅಧ್ಯಕ್ಷರಾಗಿರುವ ಕಾರಣ ಮಲ್ಲಿಕಾರ್ಜುನ ಖರ್ಗೆ ಅವರು ಈ ಸಲ ಸ್ಪರ್ಧೆಯಿಂದ ದೂರ ಉಳಿದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT