ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ: ಶಾಸಕ ಮತ್ತಿಮಡು ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ 2077 ಲೀಡ್!

Published 4 ಜೂನ್ 2024, 16:12 IST
Last Updated 4 ಜೂನ್ 2024, 16:12 IST
ಅಕ್ಷರ ಗಾತ್ರ

ಕಲಬುರಗಿ: ಕಲಬುರಗಿ ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗೆ 10 ಮತಗಳ ಮುನ್ನಡೆ ಸಿಕ್ಕರೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದ ಬಿಜೆಪಿಯ ಬಸವರಾಜ ಮತ್ತಿಮಡು ಅವರ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ರಾಧಾಕೃಷ್ಣ ದೊಡ್ಡಮನಿ ಅವರು 2,077 ಮತಗಳ ಲೀಡ್ ಪಡೆದು ಬೀಗಿದ್ದಾರೆ.

ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾಧವ್ ಅವರು 79,749 ಮತಗಳನ್ನು ಪಡೆದಿದ್ದರೆ, ರಾಧಾಕೃಷ್ಣ ದೊಡ್ಡಮನಿ ಅವರು 81,826 ಮತಗಳನ್ನು ಪಡೆದಿದ್ದಾರೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಡಾ.ಜಾಧವ್ ಪರ ಪ್ರಚಾರ ನಡೆಸಿದ್ದರು.

ತಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತಗಳನ್ನು ಕೊಡಿಸುವುದಿಲ್ಲ ಎಂದು ಮತ್ತಿಮಡು ಸಭೆಯೊಂದರಲ್ಲಿ ಹೇಳಿದ್ದರು.

ಕಾಂಗ್ರೆಸ್ ಶಾಸಕರ ಕ್ಷೇತ್ರದಲ್ಲಿ ಬಿಜೆಪಿಗೆ ಹೆಚ್ಚು ಮತ

ಕಲಬುರಗಿ: ಅಫಜಲಪುರ, ಜೇವರ್ಗಿಯಲ್ಲಿ ಕಾಂಗ್ರೆಸ್ ಶಾಸಕರಿದ್ದರೂ ಬಿಜೆಪಿ ಅಭ್ಯರ್ಥಿ ಡಾ.ಉಮೇಶ್ ಜಾಧವ್ ಅವರಿಗೆ ಹೆಚ್ಚು ಮತಗಳು ಬಂದಿವೆ. 

ಅಫಜಲ‍ಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರಾಧಾಕೃಷ್ಣ ಅವರಿಗೆ 65,300 ಮತಗಳು ಚಲಾವಣೆಯಾಗಿದ್ದರೆ, ಉಮೇಶ್ ಜಾಧವ್ ಅವರಿಗೆ 85,929 ಮತಗಳು ಬಂದಿವೆ. ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯ್ ಸಿಂಗ್ ಕ್ಷೇತ್ರ ಜೇವರ್ಗಿಯಲ್ಲಿ ರಾಧಾಕೃಷ್ಣ ಅವರು 74,667 ಮತಗಳನ್ನು ಪಡೆದಿದ್ದರೆ, ಜಾಧವ್ ಅವರಿಗೆ 79,703 ಮತಗಳು ಬಂದಿವೆ.

ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಕ್ಷೇತ್ರ ಚಿತ್ತಾಪುರದಲ್ಲಿ ಕಾಂಗ್ರೆಸ್‌ಗೆ 80,756 ಮತಗಳು ಬಂದಿದ್ದರೆ, ಬಿಜೆಪಿಗೆ 64,416 ಮತಗಳು ಚಲಾವಣೆಯಾಗಿವೆ. ಸಚಿವ ಡಾ.ಶರಣಪ್ರಕಾಶ್ ಪಾಟೀಲ ಪ್ರತಿನಿಧಿಸುವ ಸೇಡಂ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ 81,992 ಮತಗಳು ಬಂದಿವೆ. ಬಿಜೆಪಿ ಅಭ್ಯರ್ಥಿ ಜಾಧವ್‌ಗೆ 72,785 ಮತಗಳ ಗಳಿಕೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT