ಭಾನುವಾರ, 24 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ ನಾಳೆ

Published 12 ಸೆಪ್ಟೆಂಬರ್ 2023, 5:00 IST
Last Updated 12 ಸೆಪ್ಟೆಂಬರ್ 2023, 5:00 IST
ಅಕ್ಷರ ಗಾತ್ರ

ಕಲಬುರಗಿ: ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಸೆ.13ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಚಿಂಚೋಳಿ ಹಾಗೂ ಚಿತ್ತಾಪುರ ತಾಲ್ಲೂಕುಗಳಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎ.ಆರ್.ಕರ್ನೂಲ್ ತಿಳಿಸಿದ್ದಾರೆ.

ಲೋಕಾಯುಕ್ತ ಡಿ.ಎಸ್.ಪಿ. ಮಂಜುನಾಥ ಕೆ.ಗಂಗಲ್ (ಮೊ:93640 62570) ಹಾಗೂ ಪಿ.ಐ.ಗಳಾದ ಧೃವತಾರಾ ಸಿ. (ಮೊ:93640 62669) ಅವರು ಚಿಂಚೋಳಿ ತಹಶೀಲ್ದಾರ್‌ ಕಚೇರಿ ಸಭಾಂಗಣದಲ್ಲಿ ಅಹವಾಲು ಸ್ವೀಕರಿಸುವರು. ಪಿ.ಐ. ಅಕ್ಕಮಹಾದೇವಿ (ಮೊ:93640 62670) ಅವರು ಚಿತ್ತಾಪುರ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು.

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸಗಳನ್ನು ವಿಳಂಬ ಮಾಡುತ್ತಿದ್ದರೆ, ಕಾರಣ ಇಲ್ಲದೆ ಅರ್ಜಿ ತಿರಸ್ಕರಿಸುತ್ತಿದ್ದರೆ ಅಥವಾ ಕಚೇರಿಗೆ ಅಲೆದಾಡಿಸುತ್ತಿದ್ದಲ್ಲಿ ಹಾಗೂ ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡಿಕೊಡಲು ಯಾರಾದರೂ ಲಂಚ ಕೇಳಿದ್ದಲ್ಲಿ ಗಮನಕ್ಕೆ ತರಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ:08472-295364 ಸಂಪರ್ಕಿಸಲು ಕೋರಲಾಗಿದೆ.

ಕಾಳಗನೂರ: ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಲಬುರಗಿ: ತಾಲ್ಲೂಕಿನ ಕಾಳಗನೂರ ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿಗಳು ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಈಚೆಗೆ ನಡೆದ ಪ್ರಾಥಮಿಕ ಹಾಗೂ ಪ್ರೌಢ ವಿಭಾಗದ ತಾಲ್ಲೂಕುಮಟ್ಟ ಕ್ರೀಡಾಕೂಟದ ವಿವಿಧ ಕ್ರೀಡೆಗಳಲ್ಲಿ ಜಯಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

14 ವರ್ಷದ ಒಳಗಿನ ಬಾಲಕರು ಹಾಗೂ ಬಾಲಕಿಯರ ಕಬಡ್ಡಿ, 17 ವರ್ಷದ ಒಳಗಿನ ಬಾಲಕಿಯರ ಕಬಡ್ಡಿ, 14 ವರ್ಷದ ಒಳಗಿನ ಬಾಲಕಿಯರ ವಾಲಿಬಾಲ್ ಹಾಗೂ ಗುಂಡು ಎಸೆತ ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪಿ.ಶುಭ, ಪ್ರಾಂಶುಪಾಲ ಸುರೇಶ ಆಲ್ದಾರ್ತಿ ಹರ್ಷ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT