ಜೇವರ್ಗಿ: ಪಟ್ಟಣದ ತಹಶೀಲ್ದಾರ್ ಕಚೇರಿ ಸೇರಿದಂತೆ ವಿವಿಧ ಇಲಾಖೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದರು.

ದುರಾಡಳಿತ, ಲಂಚಕ್ಕೆ ಬೇಡಿಕೆ ಆರೋಪ ಹಿನ್ನೆಲೆ ಲೋಕಾಯುಕ್ತ ಡಿವೈಎಸ್ಪಿ ಬಸವರಾಜ ನೇತೃತ್ವದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದಿದ್ದ ಲೋಕಾಯುಕ್ತ ಪೊಲೀಸರ ಅಧಿಕಾರಿಗಳ ನಾಲ್ಕು ತಂಡ ಹಾಗೂ ಕಲಬುರಗಿ ಲೋಕಾಯುಕ್ತ ಕಚೇರಿಯ ಅಧಿಕಾರಿಗಳನ್ನೊಳಗೊಂಡ ನಾಲ್ಕು ತಂಡ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಸಿಂಧುತ್ವ ಪ್ರಮಾಣ ಪತ್ರ, ಮೈನಾರಿಟಿ, ಜಾತಿ ಪ್ರಮಾಣಪತ್ರ ಪಡೆಯಲು ಸಲ್ಲಿಕೆಯಾದ ಅರ್ಜಿಗಳು ಅದರಲ್ಲಿ ನಿಗದಿತ ಕಾಲಮಿತಿಯಲ್ಲಿ ಎಷ್ಟು ವಿಲೇವಾರಿ ಆಗಿವೆ. ಎಷ್ಟು ಬಾಕಿ ಉಳಿದಿವೆ ಎಂಬುದನ್ನು ಪರಿಶೀಲಿಸಿದರು. ಪರಿಹಾರವಾಗದೇ ಇರುವ ಸಾರ್ವಜನಿಕರ ಅಹವಾಲು, ಕಚೇರಿಯಲ್ಲಿ ಸಿಬ್ಬಂದಿ ಹಾಜರಾತಿ ವಿವರ, ಬಾಕಿ ಇರುವ ಕಡತಗಳು, ಸುದೀರ್ಘ ಕಾಲದಿಂದ ಬಾಕಿ ಉಳಿಸಿಕೊಂಡಿರುವುದಕ್ಕೆ ಕಾರಣ, ಹಕ್ಕು ಬದಲಾವಣೆ, ಭೂ ಮಂಜೂರಾತಿ, ಭೂಮಿ, ಬಗರ್ಹುಕುಂ, ಸಾಮಾಜಿಕ ಭದ್ರತಾ ಯೋಜನೆಗಳಿಗೆ ಸಂಬಂಧಿಸಿದಂತೆ ವಿಲೇವಾರಿಯಾಗದೇ ಉಳಿದಿರುವ ಅರ್ಜಿಗಳ ಬಗ್ಗೆಯೂ ಮಾಹಿತಿ ಪಡೆದರು.

ತಹಶೀಲ್ದಾರ್ ಕಚೇರಿ ಸೇರಿದಂತೆ ಆಹಾರ ಇಲಾಖೆ, ಅಬಕಾರಿ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ತಾಲ್ಲೂಕು ಪಂಚಾಯಿತಿ, ಸಮಾಜ ಕಲ್ಯಾಣ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಸರ್ವೆ ಇಲಾಖೆ, ಉಪ ನೊಂದಣಾಧಿಕಾರಿಗಳ, ಸೇರಿದಂತೆ ವಿವಿಧ ಇಲಾಖೆಗಳ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಲಾಯಿತು.

ಡಿವೈಎಸ್ಪಿ ಬಸವರಾಜ ಮಾತನಾಡಿ, ‘ಸಾರ್ವಜನಿಕರಿಗೆ ಅಧಿಕಾರಿಗಳು ಸಕಾಲದಲ್ಲಿ ಕೆಲಸ ಮಾಡಿಕೊಡಬೇಕು. ವಿನಾಕಾರಣ ತೊಂದರೆ ಕೊಡಬೇಡಿ. ಯಾವ ಹಂತದಲ್ಲಿಯೂ ಅರ್ಜಿಗಳು ಬಾಕಿ ಉಳಿಯಬಾರದು. ಪರಿಶೀಲನೆ ವೇಳೆ ತಪ್ಪಿತಸ್ಥರು ಕಂಡುಬಂದರೆ ಕ್ರಮಕ್ಕಾಗಿ ಲೋಕಾಯುಕ್ತ ಕಚೇರಿಗೆ ವರದಿ ಮಾಡಲಾಗುವುದು. ಸರ್ಕಾರಿ ಉದ್ಯೋಗ ಇದೆ ಎಂದ ಮಾತ್ರಕ್ಕೆ ಸಹಿ ಹಾಕಿ ವೇತನ ತೆಗೆದುಕೊಳ್ಳುವುದಲ್ಲ. ಗ್ರಾಮೀಣ ಭಾಗದ ಬಡ ಜನರ, ರೈತರ ಕಷ್ಟಕ್ಕೆ ನೆರವಾಗಬೇಕು’ ಎಂದು ಹೇಳಿದರು.

ಈ ವೇಳೆ ತಹಶೀಲ್ದಾರ್ ಮಲ್ಲಣ್ಣ ಯಲಗೋಡ, ಗ್ರೇಡ್-2 ತಹಶೀಲ್ದಾರ್ ಗೋಪಾಲ ಕಪೂರ, ಕ್ಷೇತ್ರ ಶಿಕ್ಷಣಾಧಿಕಾರಿ ವೀರಣ್ಣ ಬೊಮ್ಮನಹಳ್ಳಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸತೀಶಕುಮಾರ ಸಂಗನ, ಅಬಕಾರಿ ನಿರೀಕ್ಷಕ ರೇವಣಸಿದ್ದಪ್ಪ ಹೂಗಾರ, ಸಿದ್ದಣ್ಣ ಹುಲಕಲ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.