ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪತ್ನಿ ಸಹೋದರನ ಮನೆ ಮೇಲೆ ಲೋಕಾಯುಕ್ತ ದಾಳಿ

Published 5 ಡಿಸೆಂಬರ್ 2023, 4:07 IST
Last Updated 5 ಡಿಸೆಂಬರ್ 2023, 4:07 IST
ಅಕ್ಷರ ಗಾತ್ರ

ಕಲಬುರಗಿ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಪತ್ನಿಯ ಸಹೋದರನ ಮನೆ‌ಯ ಮೇಲೆ‌ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.

ಈ ಹಿಂದೆ ಕಲಬುರಗಿಯ ಆರ್‌ಸಿಎಚ್ ಆಗಿದ್ದು, ಈಗ ಯಾದಗಿರಿಯ ಡಿಎಚ್ಒ ಆಗಿರುವ ಡಾ.ಪ್ರಭುಲಿಂಗ ಮಾನಕರ ಅವರ ಕಲಬುರಗಿಯ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕಲಬುರಗಿ ನಗರದ ಕರುಣೇಶ್ವರ ಕಾಲೊನಿಯಲ್ಲಿ ಇರುವ ನಿವಾಸದ ಮನೆ ಮೇಲೆ ದಾಳಿ ಮಾಡಿದ್ದಾರೆ. ಜತೆಗೆ ಯಾದಗಿರಿಯ ಮನೆ, ಕಚೇರಿ ಹಾಗೂ ಕಲಬುರಗಿ ಸಮೀಪದ ಫಾರ್ಮ್ ಹೌಸ್ ಮೇಲೂ ಲೋಕಾಯುಕ್ತ ಎಸ್ ಪಿ ಕರ್ನೂಲ್ ನೇತೃತ್ವದ ತಂಡ ದಾಳಿ ನಡೆಸಿದ್ದು, ದಾಖಲೆಗಳ ತಪಾಸಣೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT