ಬುಧವಾರ, 17 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಬಿಎಂಪಿ ಸಹಾಯಕ ಆಯುಕ್ತರ ಸ್ವಗ್ರಾಮದ ಮನೆ ಮೇಲೆ ಲೋಕಾಯುಕ್ತ ದಾಳಿ

Published 11 ಜುಲೈ 2024, 2:41 IST
Last Updated 11 ಜುಲೈ 2024, 2:41 IST
ಅಕ್ಷರ ಗಾತ್ರ

ಕಲಬುರಗಿ: ಆದಾಯಕ್ಕಿಂತ ಹೆಚ್ಚು ಆಸ್ತಿಗಳಿಸಿದ ಆರೋಪದ ಮೇಲೆ ಬಿಬಿಎಂಪಿಯ ಸಹಾಯಕ ಆಯುಕ್ತ ಬಸವರಾಜ ಮಗ್ಗಿ ಅವರ ಸ್ವಗ್ರಾಮ ಪಾಳಾದ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳಿಗ್ಗೆ ಏಕಾಏಕಿ ದಾಳಿ ಮಾಡಿದ್ದಾರೆ.

ಬೆಂಗಳೂರಿನ ಬಿಬಿಎಂಪಿ ಮಹದೇವಪುರ ವಿಭಾಗದ ಸಹಾಯಕ ಆಯುಕ್ತರಾಗಿರುವ ಬಸವರಾಜ ಅವರು ಕಲಬುರಗಿ ತಾಲ್ಲೂಕಿನ ಪಾಳಾ ಗ್ರಾಮದವರು.

ಕಲಬುರಗಿ ಲೋಕಾಯುಕ್ತ ಎಸ್‌.ಪಿ .ಜಾನ್ ಆಂಟೋನಿ ಅವರ ಮಾರ್ಗದರ್ಶನದಲ್ಲಿ

ಡಿಎಸ್‌ಪಿ ಮಂಜುನಾಥ್, ಇನ್‌ಸ್ಪೆಕ್ಟರ್ ಹನುಮಂತ್ ಅವರಿದ್ದ ತಂಡ ಕಲಬುರಗಿ ನಗರ ಮತ್ತು ಪಾಳಾದಲ್ಲಿನ ಮನೆಗಳ ಮೇಲೆ ದಾಳಿ ಮಾಡಿ, ಕಡತಗಳ ಪರಿಶೀಲನೆ ನಡೆಸುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT