ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ: ನಾಮಪತ್ರ ಸಲ್ಲಿಸಿದ ಕಾಂಗ್ರೆಸ್‌ ಅಭ್ಯರ್ಥಿ ರಾಧಾಕೃಷ್ಣ

Published 12 ಏಪ್ರಿಲ್ 2024, 8:30 IST
Last Updated 12 ಏಪ್ರಿಲ್ 2024, 8:30 IST
ಅಕ್ಷರ ಗಾತ್ರ

ಕಲಬುರಗಿ: ಕಲಬುರಗಿ ಲೋಕಸಭಾ ಎಸ್‌ಸಿ ಮೀಸಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರು ಶುಕ್ರವಾರ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರಿಗೆ ನಾಮಪತ್ರ ಪ್ರತಿ ಸಲ್ಲಿಸಿದರು.

ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆಗೂ ಮುನ್ನ ನಗರದ ಡಾ.ಬಿ.ಆರ್. ಅಂಬೇಡ್ಕರ್, ಬಸವೇಶ್ವರ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಮೂರ್ತಿಗಳಿಗೆ ಮಾಲಾರ್ಪಣೆ ಮಾಡಿದರು. ಬಳಿಕ ಶರಣಬಸವೇಶ್ವರರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು.

ನಾಮಪತ್ರ ಪ್ರತಿ ಸಲ್ಲಿಕೆಯ ವೇಳೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ರಾಜ್ಯ ರೇಷ್ಮೆ ಉದ್ಯಮಗಳ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಕನೀಜ್ ಫಾತಿಮಾ, ಶಾಸಕ ಎಂ.ವೈ. ಪಾಟೀಲ ಹಾಗೂ ಮುಖಂಡ ಬಾಬುರಾವ ಚಿಂಚನಸೂರ ಉಪಸ್ಥಿತರಿದ್ದರು.

ಬಳಿಕ ಮಾತನಾಡಿದ ಡಿ.ಕೆ. ಶಿವಕುಮಾರ, ‘ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಧಾಕೃಷ್ಣ ಅವರು ಜಯಗಳಿಸುತ್ತಾರೆ. ಬಿಜೆಪಿ ನಾಯಕರಿಗೆ ಸೋಲಿನ ಭೀತಿ ಎದುರಾಗಿದೆ. ಹೀಗಾಗಿ, ಪ್ರಧಾನಿ ನರೇಂದ್ರ ಮೋದಿ ಅವರು ಕಲಬುರಗಿಯಿಂದ ಚುನಾವಣಾ ಪ್ರವಾಸ ಆರಂಭಿಸಿದ್ದರು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT