ಕಲಬುರಗಿ: ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸಬೇಕು ಎಂದು ಒತ್ತಾಯಿಸಿ ಮಾರ್ಚ್ 16ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಮಡಿವಾಳ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಘಟಕದ ಅಧ್ಯಕ್ಷ ಎಂ.ಕೆ.ಹನುಮಂತಪ್ಪ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾ.16ರಂದು ಮಾಚಿದೇವ ಯೋಗಾನಂದಪುರಿ ಸ್ವಾಮೀಜಿ, ಬಸವ ಮಾಚಿದೇವ ಸ್ವಾಮೀಜಿ, ಮುಕ್ತಾನಂದ ಸ್ವಾಮೀಜಿ ನೇತೃತ್ವದಲ್ಲಿ ನಡೆಯುವ ಶಕ್ತಿ ಪ್ರದರ್ಶನದಲ್ಲಿ ಜಿಲ್ಲೆಯ ಎಲ್ಲ ತಾಲ್ಲೂಕಿನ ಸಮುದಾಯದ ಮುಖಂಡರು ಭಾಗವಹಿಸಬೇಕು ಎಂದರು.

‘ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ರಾಜಕೀಯವಾಗಿ ತುಂಬಾ ಹಿಂದುಳಿದಿದ್ದೇವೆ. ಈಗಾಗಲೇ ದೇಶದ 18 ರಾಜ್ಯಗಳು, 3 ಕೇಂದ್ರಾಡಳಿತ ಪ್ರದೇಶದಲ್ಲಿ ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸಲಾಗಿದೆ. ಕೂಡಲೇ ಸರ್ಕಾರ ಕರ್ನಾಟಕ ರಾಜ್ಯದಲ್ಲಿಯೂ ನಮ್ಮ ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸಬೇಕು’ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಚಂದ್ರಕಾಂತ ಮಡಿವಾಳ, ಬಸವರಾಜ ಪರೀಟ್, ರಾಜು ಮಡಿವಾಳ, ಶಶಿಕಾಂತ ಮಡಿವಾಳ, ಸಂತೋಷ ಮಡಿವಾಳ, ಗುಂಡಪ್ಪ ಮಡಿವಾಳ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.