ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾಲನೋಬಿಸ್‌ ಜನ್ಮದಿನಾಚರಣೆ

Last Updated 1 ಜುಲೈ 2019, 16:31 IST
ಅಕ್ಷರ ಗಾತ್ರ

ಕಲಬುರ್ಗಿ: ಸಾಂಖ್ಯಿಕ ತಜ್ಞ ಪ್ರೊ.ಪಿ.ಸಿ.ಮಹಾಲನೋಬಿಸ್‍ರವರ 126ನೇ ಜನ್ಮದಿನಾಚರಣೆ ನಿಮಿತ್ತ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕಚೇರಿಯಲ್ಲಿ ಶನಿವಾರ 13ನೇ ರಾಷ್ಟ್ರೀಯ ಸಾಂಖ್ಯಿಕ ದಿನವನ್ನು ಆಚರಿಸಲಾಯಿತು.

ಹೆಚ್ಚುವರಿ ಜಿಲ್ಲಾಧಿಕಾರಿ ಶರಣಪ್ಪ ಎಸ್ ಕಾರ್ಯಕ್ರಮ ಉದ್ಘಾಟಿಸಿದರು.

ಜಿಲ್ಲಾ ಸಂಖ್ಯಾಸಂಗ್ರಹಣಾಧಿಕಾರಿ ಸುವರ್ಣ ಬಿ.ಯದಲಾಪುರೆ ಮಾತನಾಡಿ, ಸುಸ್ಥಿರ ಅಭಿವೃದ್ಧಿ ಗುರಿ ಮಹತ್ವ ಹಾಗೂ ಸಾಂಖ್ಯಿಕ ಸಿಬ್ಬಂದಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಚೇರಿಯಿಂದ ಕೈಗೊಳ್ಳುವ ಸಮೀಕ್ಷೆ ಸಂದರ್ಭದಲ್ಲಿ ನಿಖರವಾದ ಅಂಕಿ ಅಂಶಗಳನ್ನು ನೀಡಬೇಕೆಂದರು. ಸಹಾಯಕ ಸಾಂಖ್ಯಿಕ ಅಧಿಕಾರಿ ಗುರುಮೂರ್ತಿ ಬಸರಗಿ ಸಾಂಖ್ಯಿಕ ತಜ್ಞ ಮಹಾಲನೋಬಿಸ್‌ ಅವರ ಕುರಿತು ಮಾತನಾಡಿದರು.

ಗುರುಕುಲ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ಪ್ರವೀಣ ಕೆ.ಹರಿದಾಸ ಅವರು ಸುಸ್ಥಿರ ಅಭಿವೃದ್ಧಿ ಗುರಿ ಕುರಿತು ಮಾತನಾಡಿದರು. ಹೈದರಾಬಾದ್‌ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಉಪ ನಿರ್ದೇಶಕಿ ಸುಜಾತಾ ಎಸ್.ಕಾಳಗಿ ಹಾಗೂ ಮಾಧುರಿ ಎಸ್.ತವಗ ಪಾಲ್ಗೊಂಡಿದ್ದರು.

ಸಹಾಯಕ ನಿರ್ದೇಶಕ ನಾಸಿರ್‌ ಖಾನ್ ಸ್ವಾಗತಿಸಿದರು. ಸಹಾಯಕ ಸಾಂಖ್ಯಿಕ ಅಧಿಕಾರಿ ನಾಗಭೂಷಣ ಎಸ್. ಮಾಡಗಿ ಕಾರ್ಯಕ್ರಮ ನಿರೂಪಿಸಿದರು. ಸಹಾಯಕ ನಿರ್ದೇಶಕಿ (ಪರೀಕ್ಷಾರ್ಥಿ) ಮಧುಮತಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT