‘ಗಾಂಧಿ ಹೋರಾಟದಿಂದ ನೆಮ್ಮದಿ ಜೀವನ’

ಕಲಬುರಗಿ: ‘ಮಹಾತ್ಮ ಗಾಂಧೀಜಿ ನೇತೃತ್ವದ ಸ್ವಾತಂತ್ರ‍್ಯ ಚಳವಳಿಯಿಂದಾಗಿ ನಮಗೆ ಸ್ವಾತಂತ್ರ‍್ಯ ದೊರೆತಿದ್ದು, ಈಗ ನಾವೆಲ್ಲ ನೆಮ್ಮದಿಯ ಜೀವನ ನಡೆಸುತ್ತಿದ್ದೇವೆ’ ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಹೇಳಿದರು.
ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ನಡೆದ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಬಸವರಾಜ ಪಿ ಡೋಣೂರ ಮಾತನಾಡಿ, ‘ಪ್ರೀತಿ, ಸತ್ಯ ಮತ್ತು ಅಹಿಂಸೆ ಗಾಂಧೀಜಿ ಅವರ ಧರ್ಮವಾಗಿತ್ತು’ ಎಂದು ಅಭಿಪ್ರಾಯಪಟ್ಟರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.