ಭಾನುವಾರ, ಜುಲೈ 25, 2021
25 °C
ಕಲಬುರ್ಗಿ ಬಿಜೆಪಿ ನಿಯೋಗದಿಂದ ಮುಖ್ಯಮಂತ್ರಿಗೆ ಮನವಿ

ಮಾಲೀಕಯ್ಯಗೆ ಎಂಎಲ್‌ಸಿ ಮಾಡಿ: ಸಿ.ಎಂಗೆ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ಜಿಲ್ಲೆಯ ಬಿಜೆಪಿ ನಿಯೋಗ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಸೋಮವಾರ ಬೆಂಗಳೂರಿನಲ್ಲಿ ಭೇಟಿಯಾಗಿ, ಮಾಲೀಕಯ್ಯ ಗುತ್ತೇದಾರ ಅವರಿಗೆ ವಿಧಾನ ಪರಿಷತ್‌ ಸ್ಥಾನ ನೀಡಬೇಕು ಎಂದು ಮನವಿ ಸಲ್ಲಿಸಿತು.

ಸಂಸದ ಡಾ.ಉಮೇಶ ಜಾಧವ, ವಿಧಾನ ಪರಿಷತ್‌ ಸದಸ್ಯ ಬಿ.ಜಿ. ಪಾಟೀಲ, ಶಾಸಕರಾದ ಬಸವರಾಜ ಮತ್ತಿಮೂಡ, ಸುಭಾಷ ಗುತ್ತೇದಾರ, ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ಮಾಜಿ ಶಾಸಕರಾದ ವಿಶ್ವನಾಥ ಪಾಟೀಲ ಹೆಬ್ಬಾಳ, ದೊಡ್ಡನಗೌಡ ಪಾಟೀಲ ನರಿಬೋಳ ಸೇರಿದಂತೆ ಹಲವರು ಈ ನಿಯೋಗದಲ್ಲಿದ್ದರು.

‘ಮಾಲೀಕಯ್ಯ ಅವರಿಗೆ ವಿಧಾನ ಪರಿಷತ್‌ ಸ್ಥಾನ ನೀಡದರೆ ಕಲ್ಯಾಣ ಕರ್ನಾಟಕದಲ್ಲಿ ಪಕ್ಷ ಮತ್ತಷ್ಟು ಬಲವರ್ಧನೆ ಮಾಡಲು ಅನುಕೂಲ ವಾಗುತ್ತದೆ. ಲೋಕಸಭೆ ಚುನಾವಣೆಯಲ್ಲಿ ಮಾಲೀಕಯ್ಯ ಅವರು ಡಾ.ಉಮೇಶ ಜಾಧವ ಅವರನ್ನು ಗೆಲ್ಲಿಸಿಕೊಂಡು ಬರುವಲ್ಲಿ ಪ್ರಮುಖಪಾತ್ರ ವಹಿಸಿದ್ದರು. ಹೀಗಾಗಿ ಅವರಿಗೆ ಸ್ಥಾನ ನೀಡಬೇಕು’ ಎಂದು ಮುಖ್ಯಮಂತ್ರಿಗೆ ಮನವಿಮಾಡಿದರು.

‘ಮಾಲೀಕಯ್ಯ ಸೇರಿದಂತೆ ಕಲ್ಯಾಣ ಕರ್ನಾಟಕ ಇಬ್ಬರಿಗೆ ಅವಕಾಶ ನೀಡಬೇಕು’ ಎಂದೂ ಕೆಲವರು ಕೇಳಿದರು ಎಂದು ನಿಯೋಗದಲ್ಲಿದ್ದ ಮುಖಂಡರೊಬ್ಬರು ಮಾಹಿತಿ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು