ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾರಾಯಣಗುರು ನಿಗಮ ಸ್ಥಾಪನೆಗೆ ಮಾಲೀಕಯ್ಯ ಒತ್ತಾಯ

Last Updated 25 ನವೆಂಬರ್ 2020, 21:41 IST
ಅಕ್ಷರ ಗಾತ್ರ

ಕಲಬುರ್ಗಿ: ರಾಜ್ಯದಲ್ಲಿರುವ ಈಡಿಗ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಸಮುದಾಯದ ಕುಲಗುರು ಬ್ರಹ್ಮಶ್ರೀ ನಾರಾಯಣಗುರು ಹೆಸರಿನಲ್ಲಿ ನಿಗಮ ಸ್ಥಾಪಿಸಬೇಕು ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ, ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಒತ್ತಾಯಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು, ‘ರಾಜ್ಯದಲ್ಲಿ ಅಂದಾಜು 80 ಲಕ್ಷ ಈಡಿಗ ಸಮುದಾಯದವರಿದ್ದು, ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದಿದ್ದಾರೆ. ರಾಜ್ಯದಲ್ಲಿ ನೀರಾ ತೆಗೆಯಲು ನಿಷೇಧ ಹೇರಿದ ಬಳಿಕ ಕುಲ ಕಸುಬನ್ನು ಕಳೆದುಕೊಂಡು ನಿರುದ್ಯೋಗಿಗಳಾಗಿದ್ದಾರೆ. ಆದ್ದರಿಂದ ಸಮುದಾಯದ ಅಭಿವೃದ್ಧಿಗಾಗಿ ನಿಗಮ ರಚನೆ ಮಾಡಿ, ₹ 400 ಕೋಟಿ ಅನುದಾನ ಮೀಸಲಿಡಬೇಕು’ ಎಂದಿದ್ದಾರೆ.

‘ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನಿಗಮ ಸ್ಥಾಪನೆಗೆ ಮನವಿ ಮಾಡಿದ್ದೆ. ಬಜೆಟ್‌ನಲ್ಲಿ ಘೋಷಿಸಿದ್ದರೂ ಕಾರ್ಯರೂಪಕ್ಕೆ ಬರಲಿಲ್ಲ. ಇದೀಗ ನಮ್ಮದೇ ಪಕ್ಷದ ಸರ್ಕಾರವಿದೆ. ವೈಯಕ್ತಿಕವಾಗಿ ನನ್ನನ್ನು ಸಚಿವನನ್ನಾಗಿ ಮಾಡುವಂತೆ ಕೇಳಿಲ್ಲ. ಸಮುದಾಯದ ಒಳಿತಿಗಾಗಿ ಬೇಡಿಕೆ ಇಟ್ಟಿದ್ದೇನೆ. ನನ್ನ ಮನವಿಯನ್ನು ಮುಖ್ಯಮಂತ್ರಿ ಅವರು ಪುರಸ್ಕರಿಸುವ ವಿಶ್ವಾಸವಿದೆ’ ಎಂದು ಮಾಲೀಕಯ್ಯ ‘ಪ್ರಜಾವಾಣಿ’ಗೆ ತಿಳಿಸಿದರು.

‘ಸಣ್ಣ ಪುಟ್ಟ ಸಮುದಾಯಗಳಿಗೂ ಅಭಿವೃದ್ಧಿ ನಿಗಮ ಸ್ಥಾಪಿಸಲಾಗಿದೆ. ಈಡಿಗ ಸಮುದಾಯಕ್ಕೆ ಇಲ್ಲಿಯವರೆಗೂ ಸರ್ಕಾರದ ಸೌಲಭ್ಯಗಳು ಹೆಚ್ಚು ಸಿಕ್ಕಿಲ್ಲ. ವೀರಶೈವ–ಲಿಂಗಾಯತ ಅಭಿವೃದ್ಧಿ ನಿಗಮದ ಮಾದರಿಯಲ್ಲಿ ಹೆಚ್ಚು ಅನುದಾನ ಮೀಸಲಿಡಬೇಕು ಎಂದು ಮನವಿ ಮಾಡಿದ್ದೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT