ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ಮಲ್ಲಿಕಾರ್ಜುನ ಛತ್ರೆ ಸೇವೆ ಶ್ಲಾಘನೀಯ’

Published 10 ಜುಲೈ 2024, 6:12 IST
Last Updated 10 ಜುಲೈ 2024, 6:12 IST
ಅಕ್ಷರ ಗಾತ್ರ

ಸೇಡಂ: ಆರೋಗ್ಯ ಇಲಾಖೆಯಲ್ಲಿ ಸುಮಾರು 38 ವರ್ಷಗಳ ಕಾಲ ನಿರಂತರ ಸೇವೆ ಸಲ್ಲಿಸಿರುವ ಮಲ್ಲಿಕಾರ್ಜುನ ಛತ್ರೆ ಅವರ ಸೇವೆ ಶ್ಲಾಘನೀಯವಾಗಿದೆ’ ಎಂದು ಉಪವಿಭಾಗಾಧಿಕಾರಿ ಆಶಪ್ಪ ಪೂಜಾರಿ ಅಭಿಪ್ರಾಯಪಟ್ಟರು.

ಪಟ್ಟಣದ ಸರ್ಕಾರಿ ನೌಕರ ಭವನದಲ್ಲಿ ಈಚೆಗೆ ಆರೋಗ್ಯ ಇಲಾಖೆಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮಲ್ಲಿಕಾರ್ಜುನ ಛತ್ರೆ ಅವರ ಸೇವಾ ನಿವೃತ್ತಿ ನಿಮಿತ್ತ ಹಮ್ಮಿಕೊಂಡ ಅಭಿನಂದನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

‘ಕೋವಿಡ್ ಸಂದರ್ಭದಲ್ಲಿ ಮಲ್ಲಿಕಾರ್ಜುನ ಛತ್ರೆ ಅವರು ಜವಾಬ್ದಾರಿಯನ್ನು ತೊಂದರೆಯಾಗದೇ ಕಾನೂನಿನ ಚೌಕಟ್ಟಿನಲ್ಲಿ ನಿಭಾಯಿಸಿದ್ದಾರೆ’ ಎಂದರು.

ಕಾರ್ಯಕ್ರಮದಲ್ಲಿ ಡಾ.ಎಸ್.ಎನ್ ದೊಡ್ಡಮನಿ, ಡಾ.ರವಿ ಬನ್ನೇರ, ಡಾ.ಸದಾನಂದ ಬೂದಿ, ಸಾಯಿರೆಡ್ಡಿ ಬಿಚ್ಚಪ್ಪ, ಮಾಣಿಪ್ಪ , ಶ್ರೀನಿವಾಸರೆಡ್ಡಿ ಪಾಟೀಲ, ಬಿಚ್ಚಪ್ಪ, ಸಂಗಯ್ಯ ಕೊಂತನಪಲ್ಲಿ, ಪೂರ್ಣ ಚಂದ್ರ, ಡಾ.ಸದಾಶಿವ ಅವರನ್ನು ವಿಶೇಷವಾಗಿ ಸತ್ಕರಿಸಲಾಯಿತು. ಸೇವಾ ನಿವೃತ್ತಿ ಹೊಂದಿದ್ದ ಮಲ್ಲಿಕಾರ್ಜುನ ಛತ್ರೆ ಅವರನ್ನು ಸಮಾರಂಭದಲ್ಲಿ ವಿಶೇಷವಾಗಿ ಸತ್ಕರಿಸಿ, ಅಭಿನಂದನೆ ಸಲ್ಲಿಸಲಾಯಿತು.

ಕೊತ್ತಲ ಬಸವೇಶ್ವರ ದೇವಾಲಯದ ಸದಾಶಿವ ಸ್ವಾಮೀಜಿ, ಪಂಚಾಕ್ಷರಿ ಮಹಾಸ್ವಾಮೀಜಿ, ಡಾ. ಓಂಪ್ರಕಾಶ ಪಾಟೀಲ, ಡಾ. ಅಂಬಾರಾಯ ರುದ್ರವಾಡಿ, ಶಿವಯ್ಯ ಸ್ವಾಮಿ ಬಿಬ್ಬಳ್ಳಿ, ಶರಣಗೌಡ ಪಾಟೀಲ ಕೋಡ್ಲಾ, ಸುಮಾ ಚಿಮ್ಮನಚೋಡ್ಕರ್, ಸತೀಶ ಪೂಜಾರಿ ಇದ್ದರು. ಭವಾನಿ ಪ್ರಾರ್ಥಿಸಿದರು. ಜ್ಯೋತಿ ನಿರೂಪಿಸಿದರು. ಶಿವಯೋಗಿ ಸಕ್ಪಾಲ್ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT