ಬುಧವಾರ, ಮೇ 25, 2022
29 °C

ಮಲ್ಲಿಕಾರ್ಜುನ್‌ ಖರ್ಗೆ ಆಯ್ಕೆ: ಕಾಂಗ್ರೆಸ್ ಕಾರ್ಯಕರ್ತರ ವಿಜಯೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ರಾಜ್ಯಸಭೆ ವಿರೋಧ ಪಕ್ಷದ ನಾಯಕರಾಗಿ ಕಾಂಗ್ರೆಸ್ ಹಿರಿಯ ಮುಖಂಡ ಎಂ. ಮಲ್ಲಿಕಾರ್ಜುನ ಖರ್ಗೆ ಅವರು ನಿಯುಕ್ತರಾದ  ಪ್ರಯುಕ್ತ ನಗರದ ಜಗತ್ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ವಿಜಯೋತ್ಸವ ಆಚರಿಸಿದರು.

ಪಕ್ಷದ ಕಚೇರಿಯಿಂದ ಖರ್ಗೆ ಅವರ ದೊಡ್ಡ ಭಾವಚಿತ್ರವನ್ನು ಮೆರವಣಿಗೆಯಲ್ಲಿ ಹೊತ್ತುಕೊಂಡ ಬಂದ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಧ್ವಜವನ್ನು ಬೀಸುತ್ತಾ ಖರ್ಗೆ ಅವರಿಗೆ ಜಯಘೋಷ ಹಾಕಿದರು.

‌ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ಮುಖಂಡರು, ‘ಖರ್ಗೆ ಅವರು ರಾಜ್ಯಸಭೆ ವಿರೋಧ ಪಕ್ಷದ ನಾಯಕರಾಗಿದ್ದರಿಂದ ಈ ಭಾಗದ ಜ್ವಲಂತ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಲಿದ್ದಾರೆ. ಜೊತೆಗೆ ನರೇಂದ್ರ ಮೋದಿ ಸರ್ಕಾರದ ದುರಾಡಳಿತವನ್ನು ದೇಶದ ಎದುರು ಎಳೆ ಎಳೆಯಾಗಿ ಬಿಚ್ಚಿಡಲಿದ್ದಾರೆ. ಕಳೆದ ಅವಧಿಯಲ್ಲಿ ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿರುವ ಖರ್ಗೆ ಅವರು ಸರ್ಕಾರದ ವೈಫಲ್ಯಗಳನ್ನು ಬಿಡಿಸಿಡುವ ಮೂಲಕ ಸರ್ಕಾರಕ್ಕೆ ಸಿಂಹಸ್ವಪ್ನವಾಗಿದ್ದರು. ಇದೀಗ ಮತ್ತೆ ಧ್ವನಿ ಕಳೆದುಕೊಂಡವರ ಧ್ವನಿಯಾಗಿ ಕೆಲಸ ಮಾಡಲಿದ್ದಾರೆ. ಅವರ ಅಪಾರ ಅನುಭವ ಹಾಗೂ ಜನಪರ ಕಾಳಜಿಯ ಹಿನ್ನೆಲೆಯಿಂದಾಗಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲಿದ್ದಾರೆ. ಕಲ್ಯಾಣ ಕರ್ನಾಟಕ ಭಾಗಕ್ಕೆ ಆದ ಅನ್ಯಾಯವನ್ನು ಸರಿಪಡಿಸಲಿದ್ದಾರೆ’ ಎಂದು ಅವರು ಹೇಳಿದರು.

‌ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ ಕಾಳಗಿ, ಮುಖಂಡರಾದ ನೀಲಕಂಠ ಮೂಲಗೆ, ಮಜರ್ ಖಾನ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲತಾ ರವಿ ರಾಠೋಡ, ರೇಣುಕಾ ಸಿಂಗೆ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು
ಭಾಗವಹಿಸಿದ್ದರು. ಯುವ ಕಾಂಗ್ರೆಸ್‌ ಕಾರ್ಯಕರ್ತರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು