ಶನಿವಾರ, ಅಕ್ಟೋಬರ್ 16, 2021
21 °C

ದಂಪತಿ ಜಗಳ; ವಿಷ ಸೇವಿಸಿ ಪತಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರಗಿ: ವಿಪರೀತ ಸಾಲ ಮಾಡಿಕೊಂಡ ವಿಷಯಕ್ಕೆ ಸಂಬಂಧಿಸಿದಂತೆ ದಂಪತಿ ಮಧ್ಯೆ ನಡೆದ ಜಗಳದಲ್ಲಿ ಪತಿಯು ವಿಷ ಸೇವಿಸಿ ಮೃತಪಟ್ಟಿದ್ದಾರೆ.

ಪತ್ನಿ ವಿಷ ಸೇವಿಸಿದ್ದಾರೆಂದು ಭಾವಿಸಿ ಪತಿ ವಿಷ ಸೇವಿಸಿದರು. ಘಟನೆಯಲ್ಲಿ ಬಸವರಾಜ ಅಚ್ಚಕೇರಿ (32) ಮೃತಪಟ್ಟರೆ, ಪತ್ನಿ ಗೀತಾ (29) ಬದುಕುಳಿದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

‘ತಾಲ್ಲೂಕಿನ ಸಿರನೂರ ಗ್ರಾಮದಲ್ಲಿ ವಾಸವಿದ್ದ ದಂಪತಿ ಸಾಲದ ವಿಷಯದಲ್ಲಿ ಆಗಾಗ್ಗೆ ಜಗಳವಾಡುತ್ತಿದ್ದರು. ಕೃಷಿಗಾಗಿ ಬಸವರಾಜ ₹ 5 ಲಕ್ಷ ಸಾಲ ಮಾಡಿಕೊಂಡಿದ್ದರು. ಈಚೆಗೆ ಸುರಿದ ಮಳೆಯಿಂದ ಬೆಳೆ ಹಾಳಾಗಿತ್ತು. ಇದರಿಂದ ಪತಿಯ ಜೊತೆ ಜಗಳ ತಾರಕಕ್ಕೇರಿ ಪತ್ನಿ ಗೀತಾ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದರು’ ಎಂದು ಪೊಲೀಸರು ತಿಳಿಸಿದ್ದಾರೆ.

‘ಪತ್ನಿ ವಿಷ ಸೇವಿಸಿ ಆಸ್ಪತ್ರೆ ಸೇರಿರುವ ವಿಚಾರ ಅರಿತು ಬಸವರಾಜ ಆತಂಕಗೊಂಡು ವಿಷ ಸೇವಿಸಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸುವ ಮಾರ್ಗಮಧ್ಯೆಯೇ ಮೃತಪಟ್ಟರು. ಗೀತಾ ಜಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ’ ಎಂದು ಅವರು ತಿಳಿಸಿದ್ದಾರೆ. ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.