ಕಲಬುರಗಿ: ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬೈಕ್ ಸವಾರ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಕಾಳಗಿ ತಾಲ್ಲೂಕಿನ ವಚ್ಚಾ ಗ್ರಾಮದ ನಿವಾಸಿ, ಮಾಡಬೂಳ ಗ್ರಾಮ ಪಂಚಾಯಿತಿಯ ಪಂಪ್ ಆಪ್‌ರೇಟರ್ ಮಲ್ಲಣಗೌಡ ಮೃತಪಟ್ಟವರು.
ಆ.20ರ ಮಧ್ಯಾಹ್ನ ಬೊಳೆವಾಡ ಗ್ರಾಮದಲ್ಲಿನ ತಮ್ಮ ಜಮೀನಿಗೆ ಬೈಕ್ ಮೇಲೆ ತೆರಳುತ್ತಿದ್ದರು. ಮಾರ್ಗ ಮಧ್ಯದಲ್ಲಿ ಬೈಕ್ ನಿಯಂತ್ರಣ ತಪ್ಪಿ ರಸ್ತೆಯ ಮೇಲೆ ಬಿದ್ದು, ಗಂಭೀರವಾಗಿ ಗಾಯಗೊಂಡಿದ್ದರು. ತಲೆ, ಎದೆ, ಭುಜಕ್ಕೆ ತೀವ್ರ ಗಾಯವಾಗಿತ್ತು. ತಕ್ಷಣವೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.
ಸಂಚಾರ ಪೊಲೀಸ್ ಠಾಣೆ–2ರಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.