ಸೇಡಂ: ತಾಲ್ಲೂಕಿನ ತೊಟ್ನಳ್ಳಿ ಗ್ರಾಮದಲ್ಲಿ ಯುವಕನೊಬ್ಬ ಅರೆಬೆತ್ತಲೆಯಾಗಿ ತಲ್ವಾರ್ ಹಿಡಿದು ಓಡಾಡುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಗ್ರಾಮದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಸಂದರ್ಭದಲ್ಲಿ ಗ್ರಾಮದ ಯುವಕರ ಮಧ್ಯೆ ಜಗಳವಾಗಿತ್ತು ಎಂದು ಹೇಳಲಾಗುತ್ತಿದೆ. ಈ ಸಂಬಂಧ ಮಳಖೇಡ ಠಾಣೆಯ ಪೊಲೀಸರು ಗ್ರಾಮಸ್ಥರೊಂದಿಗೆ ಶಾಂತಿ ಸಂದಾನ ಮಾಡಿದ್ದರು.
ಶನಿವಾರ ಯುವಕನೊಬ್ಬ ಕೈಯಲ್ಲಿ ತಲ್ವಾರ್ ಹಿಡಿದು ಓಡಾಡಿದ್ದಕ್ಕೆ ಗ್ರಾಮಸ್ಥರಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ತಲ್ವಾರ್ ಹಿಡಿದ ಯುವಕ 25 ಸೆಕೆಂಡ್‌ಗಳ ವಿಡಿಯೊ ಹರಿದಾಡುತ್ತಿದೆ.