ಶುಕ್ರವಾರ, ಅಕ್ಟೋಬರ್ 7, 2022
28 °C

ಕಲಬುರಗಿ: ಹಲ್ಲೆ ಆರೋಪಿಗೆ ಜೈಲು ಶಿಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರಗಿ: ನೆರೆ ಮನೆಯವರ ಜೊತೆಗೆ ಜಗಳವಾಡಿ, ಮಾರಣಾಂತಿಕವಾಗಿ ಹಲ್ಲೆ ಮಾಡಿ ಗಾಯಗೊಳಿಸಿದ್ದ ಆರೋಪಿಗೆ  3 ವರ್ಷ 4 ತಿಂಗಳು ಜೈಲು ಶಿಕ್ಷೆ ಮತ್ತು ₹10 ಸಾವಿರ ದಂಡ ವಿಧಿಸಿ 2ನೇ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ ನೇಸರಗಿ ತೀರ್ಪು ನೀಡಿದ್ದಾರೆ.

ನಗರದ ನಿವಾಸಿ ರಾಜಕುಮಾರ ಗೋವನ ಶಿಕ್ಷಗೆ ಒಳಗಾದ ಆರೋಪಿ. ವಕೀಲರಾದ ಜಯಶ್ರೀ ಅವರು ದೂರುದಾರರ ಪರವಾಗಿ ವಾದ ಮಂಡಿಸಿದರು.

2020ರ ಫೆಬ್ರವರಿ 13ರಂದು ರಾಜಕುಮಾರ ಎಂಬಾತ ತಮ್ಮ ಮನೆಯ ಗೋಡೆಗೆ ಮೆಟ್ಟಿಲು ತಾಗುತ್ತಿದೆ ಎಂದು ಕಟ್ಟಿಗೆಯಿಂದ ಹಲ್ಲೆ ಮಾಡಿದ್ದ. ಜತೆಗ ಅವಾಚ್ಯ ಪದಗಳಿಂದ ನಿಂದಿಸಿದ್ದ ಎಂದು ಆರೋಪಿಸಿ ಹಲ್ಲೆಗೆ ಒಳಗಾದ ಪಕ್ಕದ ಮನೆಯ ನಿವಾಸಿ ರಾಘವೇಂದ್ರ ನಗರ ಪೊಲೀಸ್ ಠಾಣೆಯಲ್ಲಿ ದೂರ ದಾಖಲಿಸಿದ್ದ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು