ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅ 2ರವರೆಗೆ ಸೇವಾ ಪಾಕ್ಷಿಕ ಆಚರಣೆ: ಪ್ರಧಾನಿ ನರೇಂದ್ರ ಮೋದಿ ಜನ್ಮದಿನ

ನಾಳೆ ಪ್ರಧಾನಿ ನರೇಂದ್ರ ಮೋದಿ ಜನ್ಮದಿನ; 15 ದಿನ ವಿವಿಧ ಕಾರ್ಯಕ್ರಮ
Last Updated 15 ಸೆಪ್ಟೆಂಬರ್ 2022, 16:11 IST
ಅಕ್ಷರ ಗಾತ್ರ

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನಸೆಪ್ಟೆಂಬರ್ 17ರಂದು ಇರುವುದರಿಂದ, ಅಂದಿನಿಂದ ಅಕ್ಟೋಬರ್‌ 2ರವರೆಗೆ ಬಿಜೆಪಿ ವತಿಯಿಂದ ಸೇವಾ ಪಾಕ್ಷಿಕ ಹಮ್ಮಿಕೊಳ್ಳಲಾಗುತ್ತಿದೆ ಎಂದು ಸಂಸದ ಡಾ.ಉಮೇಶ್ ಜಾಧವ ತಿಳಿಸಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಜೆಪಿ ಯುವ ಮೋರ್ಚಾ ವತಿಯಿಂದ 17ರಂದು ದೇಶದಾದ್ಯಂತ ರಕ್ತದಾನ ಶಿಬಿರಗಳನ್ನು ಏರ್ಪಡಿಸಲಾಗುತ್ತಿದೆ. ಜೊತೆಗೆ, ಅಂಗವಿಕಲರಿಗೆ ಕೃತಕ ಅಂಗಾಂಗ ಜೋಡಣಾ ಶಿಬಿರಗಳನ್ನು ಏರ್ಪಡಿಸಲಾಗುತ್ತಿದೆ’ ಎಂದರು.

ಜಿಲ್ಲೆಯಾದ್ಯಂತ 75 ಕೆರೆಗಳನ್ನು ಪ್ರವಾಸಿ ತಾಣಗಳಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಇದಕ್ಕೆ ಪೂರಕವಾಗಿ ಬಿಜೆಪಿ ಕಾರ್ಯಕರ್ತರು ತಮ್ಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ನದಿ, ಕೆರೆ, ಬಾವಿಗಳ ಸ್ವಚ್ಛತಾ ಕಾರ್ಯ ಕೈಗೊಂಡು, ಸಸಿಗಳನ್ನು ನೆಡಲಿದ್ದಾರೆ ಎಂದು ತಿಳಿಸಿದರು.

ಪಕ್ಷದ ಕಾರ್ಯಕರ್ತರು, ಜನಪ್ರತಿನಿಧಿಗಳು, ಪದಾಧಿಕಾರಿಗಳು ಸೇವಾ ಪಾಕ್ಷಿಕದ ಅವಧಿಯಲ್ಲಿ ಐವರು ಕ್ಷಯ ರೋಗಿಗಳಿಗೆ ಮಾರ್ಗದರ್ಶನ ಹಾಗೂ ಚಿಕಿತ್ಸಾ ವ್ಯವಸ್ಥೆ ಕಲ್ಪಿಸಲಿದ್ದಾರೆ ಎಂದರು.

ಜಿಲ್ಲಾ ಮತ್ತು ಮಂಡಲ ಮಟ್ಟದಲ್ಲಿ ಪ್ರಧಾನಿ ಮೋದಿಯವರ ಜೀವನದ ಪರಿಚಯ ಮಾಡಿಕೊಡುವ ಪ್ರದರ್ಶನ ಹಮ್ಮಿಕೊಳ್ಳಲಾಗುವುದು. ಮೋದಿ ಆಡಳಿತಾವಧಿಯಲ್ಲಿ ಕೈಗೊಂಡ ಜನಕಲ್ಯಾಣ ಯೋಜನೆಗಳ ಕುರಿತಾದ ಪುಸ್ತಕ ಪ್ರದರ್ಶನ ನಡೆಯಲಿದೆ. ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಹಮ್ಮಿಕೊಳ್ಳುವುದು, ಎರಡು ದಿನಗಳ ಕಾಲ ಸ್ವಚ್ಛತಾ ಅಭಿಯಾನ, ಮಳೆ ನೀರಿನ ಸಂಗ್ರಹ ಕುರಿತು ಜಾಗೃತಿ ಮೂಡಿಸಲಾಗುತ್ತದೆ. 25ರಂದು ಪಂಡಿತ ದೀನ್ ದಯಾಳ್ ಉಪಾಧ್ಯಾಯ ಜಯಂತಿ ಆಚರಿಸಲಾಗುವುದು. ಅಕ್ಟೋಬರ್ 2ರಂದು ಗಾಂಧಿ ಜಯಂತಿ ಆಚರಣೆ ಪ್ರಯುಕ್ತ ಸ್ವದೇಶಿ, ಸರಳತೆ, ಶುಚಿತ್ವದ ಕುರಿತು ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ಬಿಜೆಪಿ ಮಾಧ್ಯಮ ಸಂಚಾಲಕ ಚಂದ್ರಶೇಖರ ರೆಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT