ಭಾನುವಾರ, ಮಾರ್ಚ್ 26, 2023
24 °C
ಪುರುಷರಿಗೆ 6.5 ಕಿ.ಮೀ. ಮಹಿಳೆಯರಿಗೆ 5.5 ಕಿ.ಮೀ. ಓಟದ ಸ್ಪರ್ಧೆ

ಸ್ವಚ್ಛ ಕಲಬುರಗಿಗಾಗಿ ಮ್ಯಾರಥಾನ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರಗಿ: ಸ್ವಚ್ಛ ಸರ್ವೇಕ್ಷಣ, ಸ್ವಚ್ಛ ಭಾರತ ಹಾಗೂ ಅಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ನಗರದ ಜನತೆಯಲ್ಲಿ ಸ್ವಚ್ಛತೆಯ ಅರಿವು ಮೂಡಿಸಲು ಮಹಾನಗರ ಪಾಲಿಕೆಯು ಸೋಮವಾರ ಬೆಳಿಗ್ಗೆ ನಗರದಲ್ಲಿ ಆಯೋಜಿಸಿದ್ದ ಮ್ಯಾರಥಾನ್ ಓಟಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ‌ ನಿರಾಣಿ ಚಾಲನೆ ನೀಡಿದರು.

ಹಸಿರು ಕಲಬುರಗಿ ಜಾಗೃತಿಗೆ ಕಲಬುರಗಿ ಕೋಟೆಯಿಂದ ಆರಂಭಗೊಂಡ ಓಟ ಜಗತ್ ವೃತ್ತ, ಅನ್ನಪೂರ್ಣ ಕ್ರಾಸ್, ಖರ್ಗೆ ಪೆಟ್ರೋಲ್ ಪಂಪ್ ಮಾರ್ಗವಾಗಿ ಟೌನ್ ಹಾಲ್ ಬಳಿ ಕೊನೆಗೊಂಡಿತು.

ಸುಮಾರು 1000ಕ್ಕೂ ಅಧಿಕ ವಿದ್ಯಾರ್ಥಿ, ವಿದ್ಯಾರ್ಥಿನಿಯರು, ನೌಕರರು, ಕ್ರೀಡಾಪಟುಗಳು, ಸಾರ್ವಜನಿಕರು ಭಾಗವಹಿಸಿದ್ದರು.

ಪಾಲಿಕೆಯಿಂದ ಆಯೋಜಿಸಿದ್ದ ಈ ಕಾರ್ಯಕ್ರಮಕ್ಕೆ ನಗರದ ಮಣೂರ ಆಸ್ಪತ್ರೆ ಸೇರಿದಂತೆ ವಿವಿಧ ಖಾಸಗಿ ಪ್ರಾಯೋಜಕರು ಸಹಯೋಗ ನೀಡಿದರು.

ವಿಧಾನ‌ ಪರಿಷತ್ ಸದಸ್ಯ ಶಶೀಲ್ ಜಿ.ನಮೋಶಿ, ಮಹಾನಗರ ಪಾಲಿಕೆಯ ಆಯುಕ್ತ ಸ್ನೇಹಲ್ ಸುಧಾಕರ ಲೋಖಂಡೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ದಿಲೀಷ್ ಶಶಿ, ಡಿಸಿಪಿ ಅಡ್ಡೂರು ಶ್ರೀನಿವಾಸಲು ಸೇರಿದಂತೆ ಪಾಲಿಕೆ ಅಧಿಕಾರಿಗಳು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.