ಸೋಮವಾರ, ಜೂನ್ 21, 2021
23 °C

ತಾಜಸುಲ್ತಾನಪುರ: ಕೊರೊನಾ ಜಾಗೃತಿಗೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ತಾಲ್ಲೂಕಿನ ತಾಜ ಸುಲ್ತಾನಪುರ ಗ್ರಾಮದಲ್ಲಿ ಬುಧವಾರ ಕೊರೊನಾ ಜಾಗೃತಿ ಅಭಿಯಾನಕ್ಕೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಾನಪ್ಪ ಕಟ್ಟಿಮನಿ ಮಾಸ್ಕ್ ವಿತರಿಸುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಗ್ರಾಮದ ಪ್ರತಿ ಓಣಿಯಲ್ಲಿ ಜಾಗೃತಿ ಜಾಥಾ ಕೈಗೊಂಡು ಕೊರೊನಾ ಮುಂಜಾಗ್ರತಾ ಕ್ರಮಗಳು ಮತ್ತು ಲಸಿಕೆ ಮಹತ್ವದ ಕುರಿತು ಮಾಹಿತಿ ನೀಡಲಾಗುತ್ತಿದೆ. ಮುಖ್ಯ ಬೀದಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸ್ಯಾನಿಟೈ‍ಜೇಶನ್ ಮಾಡಬೇಕು. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಗ್ರಾಮದಲ್ಲಿ ರೋಗ ಲಕ್ಷಣ ಇರುವವರನ್ನು ಗುರುತಿಸಬೇಕು’ ಎಂದು ಸೂಚಿಸಿದರು.

ಗ್ರಾಮ ಪಂಚಾಯಿತಿ ಕಾರ್ಯಪಡೆ ಸಮಿತಿ ಅಧ್ಯಕ್ಷರು, ಸದಸ್ಯರು ಜಾಗೃತಿ ಜಾಥಾದಲ್ಲಿ ಪಾಲ್ಗೊಂಡಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.