ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೃಹತ್ ಮೆರವಣಿಗೆ: ಜಾಧವ ಅವರಿಂದ ಶಕ್ತಿ ಪ್ರದರ್ಶನ

Published 18 ಏಪ್ರಿಲ್ 2024, 6:54 IST
Last Updated 18 ಏಪ್ರಿಲ್ 2024, 6:54 IST
ಅಕ್ಷರ ಗಾತ್ರ

ಕಲಬುರಗಿ: ಕಲಬುರಗಿ ಲೋಕಸಭಾ ಎಸ್‌ಸಿ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಂಸದ ಡಾ.ಉಮೇಶ ಜಾಧವ ಅವರು ಗುರುವಾರ ನಾಮಪತ್ರ ಸಲ್ಲಿಕೆಯ ಮೆರವಣಿಗೆಯಲ್ಲಿ ಶಕ್ತಿ ಪ್ರದರ್ಶನ ಮಾಡಿದರು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಚಿವ ಅರವಿಂದ್ ಲಿಂಬಾವಳಿ, ವಿಜಯಪುರ ಸಂಸದ ರಮೇಶ ಜಿಗಜಿಣಗಿ ಅವರೂ ಜತೆಯಾದರು.

ಗಂಜ್ ಪ್ರದೇಶದ ನಗರೇಶ್ವರ ಶಾಲಾ ಮುಂಭಾಗದಿಂದ ತೆರೆದ ವಾಹನದಲ್ಲಿ ಆರಂಭವಾದ ಮೆರವಣಿಗೆ ಸೂಪರ್ ಮಾರ್ಕೆಟ್, ಜಗತ್ ವೃತ್ತ ಹಾಗೂ ಜಿಲ್ಲಾಧಿಕಾರಿ ಕಚೇರಿಯತ್ತ ಸಾಗಿತು. ಜಿಲ್ಲೆಯ ನಾನಾ ಗ್ರಾಮಗಳಿಂದ ಬಂದು ಸೇರಿದ ಅಪಾರ ಸಂಖ್ಯೆಯ ಕಾರ್ಯಕರ್ತರು ಸುಡು ಬಿಸಿಲನ್ನು ಲೆಕ್ಕಿಸದೆ ಮೆರವಣಿಗೆಯಲ್ಲಿ ಸಾಗಿದರು.

ಅಪಾರ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು ಬಿಜೆಪಿ, ಕೇಸರಿ‌ ಬಾವುಟ ಹಿಡಿದು ಸಾಗಿದರು. ಹಲಗೆ, ಧ್ವನಿವರ್ಧಕ, ಭಾಜಾ ಭಜಂತ್ರಿಗೆ ಯುವಕರು ಕುಣಿದು ಕುಪ್ಪಳಿಸಿದರು.

ಮೆರವಣಿಗೆಯಲ್ಲಿ ಶಾಸಕ ಬಸವರಾಜ ಮತ್ತಿಮಡು, ಜಿಲ್ಲಾ ಗ್ರಾಮೀಣ ಘಟಕದ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ನಗರ ಘಟಕದ ಅಧ್ಯಕ್ಷ ಚಂದು ಪಾಟೀಲ, ಮುಖಂಡರಾದ ಪಿ. ರಾಜೀವ್, ಕೃಷ್ಣ ಜಿ. ಕುಲಕರ್ಣಿ ಸೇರಿ ಹಲವರು ಪಾಲ್ಗೊಂಡಿದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT